ನವದೆಹಲಿ: ದೇಶದಲ್ಲಿ ಇನ್ನೂ 7 ಕೋವಿಡ್ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರತಿಯೊಬ್ಬ ನಾಗರಿಕನಿಗೂ ಲಸಿಕೆ ದೊರೆಯುವಂತೆ ಮಾಡಲು, ಇನ್ನಷ್ಟು ಲಸಿಕೆ ಅಭಿವೃದ್ಧಿ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಮುಕ್ತ ಮಾರುಕಟ್ಟೆಯಲ್ಲಿ ಲಸಿಕೆ ದೊರೆಯುವಂತೆ ಮಾಡುವುದಕ್ಕೆ ಕೇಂದ್ರ ಸರ್ಕಾರದ ಬಳಿ ತಕ್ಷಣದ ಯೋಜನೆ ಇಲ್ಲ. ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಓದಿ:ಮಾರ್ಚ್ನಲ್ಲಿ 3ನೇ ಹಂತದ ಲಸಿಕೆ: ಹರ್ಷವರ್ಧನ್

50 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಮಾರ್ಚ್ನಲ್ಲಿ ಆರಂಭಗೊಳ್ಳಲಿದೆ ಎಂದೂ ಅವರು ತಿಳಿಸಿದ್ದಾರೆ.

‘ನಾವು ಕೇವಲ ಎರಡು ಲಸಿಕೆಗಳ ಮೇಲೆ ಅವಲಂಬಿತರಾಗಿರಲು ಸಾಧ್ಯವಿಲ್ಲ. ಇನ್ನೂ ಏಳು ದೇಶೀಯ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಮೂರು ಲಸಿಕೆಗಳು ಪ್ರಯೋಗ ಹಂತದಲ್ಲಿವೆ. ಎರಡು ಕ್ಲಿನಿಕಲ್ ಟ್ರಯಲ್ಗೂ ಮೊದಲಿನ ಹಂತದಲ್ಲಿವೆ. ಇನ್ನೊಂದು ಲಸಿಕೆಯ ಮೊದಲ ಹಂತದ ಪ್ರಯೋಗ ನಡೆಯುತ್ತಿದೆ. ಇನ್ನೊಂದು ಲಸಿಕೆಯ 2ನೇ ಹಂತದ ಪ್ರಯೋಗ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಓದಿ:Explainer: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚುತ್ತಲೇ ಇರುವುದು ಏಕೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.