ನವದೆಹಲಿ: ಚೀನಾವು ವಿವಾದಿತ ಗಡಿ ಪ್ರದೇಶದಲ್ಲಿ ಗಣನೀಯ ಸಂಖ್ಯೆಯಲ್ಲಿ ಸೇನೆಯನ್ನು ಜಮಾವಣೆ ಮಾಡುತ್ತಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಭಾರತವೂ ಅದಕ್ಕೆ ಸಮನಾಗಿ ತನ್ನ ಸೇನೆಯನ್ನು ನಿಯೋಜಿಸುತ್ತಿದೆ ಎಂದು ಭಾರತೀಯ ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ತಿಳಿಸಿದ್ದಾರೆ.

3,500 ಕಿ.ಮೀ (2,200 ಮೈಲಿ) ಉದ್ದ ಗಡಿಯಲ್ಲಿ ಚೀನಾ ಸೈನ್ಯದ ಉಪಸ್ಥಿತಿ ಗಣನೀಯ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಇದಕ್ಕೆ ಪ್ರತಿಯಾಗಿ ಭಾರತವೂ ತನ್ನ ಪಡೆಯನ್ನು ಅಲ್ಲಿ ಜಮೆ ಮಾಡುತ್ತಿದೆ ಎಂದು ಅವರು ಶನಿವಾರ ಲಡಾಖ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ನಾವೂ ಬಲಿಷ್ಠರಾಗಿದ್ದು ಗಡಿಯಲ್ಲಿ ಸುಧಾರಿತ ಶಸ್ತ್ರಾಸ್ತ್ರಗಳನ್ನು ಕೂಡ ಅಳವಡಿಸಿದ್ದೇವೆ. ಯಾವುದೇ ಸಂದರ್ಭವನ್ನು ಎದುರಿಸಲು ಸಜ್ಜಾಗಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಓದಿ:ಚೀನಾ ಪಡೆಗಳಿಂದ ಅತಿಕ್ರಮಣ: ಕೇಂದ್ರದ ವಿರುದ್ಧ ರಾಹುಲ್ ಮತ್ತೊಮ್ಮೆ ವಾಗ್ದಾಳಿ

ಕಳೆದ ವರ್ಷ ಜೂನ್ ತಿಂಗಳಲ್ಲಿ ನಡೆದ ಘರ್ಷಣೆಯ ಬಳಿಕೆ ಭಾರತ ಮತ್ತು ಚೀನಾ ನಡುವೆ ಉನ್ನತ ಮಟ್ಟದ ಮಿಲಿಟರಿ ಮಾತುಕತೆಗಳು ನಡೆಯುತ್ತಿವೆ. ಮುಂದಿನ ವಾರ ಇನ್ನೊಂದು ಸಭೆಯ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನಿಂಗ್ ಅವರು ಭಾರತೀಯ ಸೈನಿಕರು ಅಕ್ರಮವಾಗಿ ಗಡಿ ದಾಟಿ ಚೀನಾದ ಭೂಪ್ರದೇಶಕ್ಕೆ ಬಂದಿದ್ದಾರೆ ಎಂದು ಕೆಲ ದಿನಗಳ ಹಿಂದೆ ಆರೋಪಿಸಿದ್ದರು. ಈ ಆರೋಪಗಳಿಗೆ ಆಧಾರವೇ ಇಲ್ಲ ಎಂದು ಭಾರತ ಪ್ರತಿಕ್ರಿಯಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.