ನವದೆಹಲಿ: ಲೋಕಸಭೆ, ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಿಡುವ ಶೇ 33 ಸ್ಥಾನಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮಹಿಳೆಯರಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ವಿರೋಧ ಪಕ್ಷಗಳ ಒಕ್ಕೂಟವಾದ ‘ಇಂಡಿಯಾ’ದ ಸಂಸದರು ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ಸೂಚಿಸಿದ್ದಾರೆ. ಈ ಸಂಬಂಧ ಲೋಕಸಭೆಯಲ್ಲಿ ತಿದ್ದುಪಡಿ ಪ್ರಸ್ತಾವವನ್ನು ಬುಧವಾರ ಸಲ್ಲಿಸಿದ್ದಾರೆ.

ಈ ಮೀಸಲಾತಿಯ ಪರಿಮಿತಿಯನ್ನು ರಾಜ್ಯಸಭೆ ಮತ್ತು ವಿಧಾನಪರಿಷತ್‌ಗೂ ವಿಸ್ತರಿಸುವಂತೆ ಪ್ರಸ್ತಾವದಲ್ಲಿ ಒತ್ತಾಯಿಸಿದ್ದಾರೆ.

ಒಬಿಸಿ ಮಹಿಳೆಯರಿಗೆ ಒಳಮೀಸಲಾತಿ ಕಲ್ಪಿಸುವಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸೌಗತ ರಾಯ್ ಅವರು ಸಲ್ಲಿಸಿರುವ ಪ್ರಸ್ತಾವದಲ್ಲಿ ತಿದ್ದುಪಡಿ ಸೂಚಿಸಿದ್ದಾರೆ. ಮಹಿಳೆಯರಿಗೆ ಮೀಸಲಿಡುವ ಸ್ಥಾನಗಳಲ್ಲಿ ಹತ್ತನೇ ಒಂದರಷ್ಟು ಸ್ಥಾನವನ್ನು (ಶೇ 10) ಒಬಿಸಿ ಮಹಿಳೆಯರಿಗೆ ಮೀಸಲಿಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಜ್ಯಸಭೆ ಮತ್ತು ವಿಧಾನ ಪರಿಷತ್‌ನಲ್ಲೂ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ಮೀಸಲಿಡಬೇಕು ಮತ್ತು ಮಹಿಳಾ ಮೀಸಲಾತಿಯನ್ನು 15 ವರ್ಷಗಳಿಗೆ ಸೀಮಿತಗೊಳಿಸುವ ಪ್ರಸ್ತಾವವನ್ನು ಕೈಬಿಡಬೇಕು ಎಂದು ಜೆಡಿಯು ಸಂಸದ ಅಲೋಕ್ ಕುಮಾರ್ ಸುಮನ್ ಅವರು ತಿದ್ದುಪಡಿ ಸೂಚಿಸಿದ್ದಾರೆ.

ರೆವಲ್ಯೂಷನರಿ ಸೋಶಿಯಲಿಸ್ಟ್ ಪಕ್ಷದ (ಆರ್‌ಎಸ್‌ಪಿ) ಸಂಸದ ಎನ್.ಕೆ. ಪ್ರೇಮಚಂದ್ರನ್ ಅವರು ಕೂಡಾ ತಿದ್ದುಪಡಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಮೀಸಲಾತಿ ಜಾರಿಯಾಗುವ ಮೊದಲು ಜನಗಣತಿ ಮತ್ತು ಕ್ಷೇತ್ರಮರುವಿಂಗಡಣೆ ಕಾರ್ಯಗಳನ್ನು ಮುಗಿಸುವ ಪ್ರಸ್ತಾವವನ್ನು ಕೈಬಿಡುವಂತೆ ಸಿಪಿಎಂ ಸಂಸದರು ರಾಜ್ಯಸಭೆಯಲ್ಲಿ ತಿದ್ದುಪಡಿ ಸೂಚಿಸಲಿದ್ದಾರೆ ಎಂದು ರಾಜ್ಯಸಭೆಯಲ್ಲಿ ಸಿಪಿಎಂ ನಾಯಕ ಎಲಮರಂ ಕರೀಂ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ಹೀಗೆ ಮಾಡುವುದರಿಂದ ಮಸೂದೆ ಜಾರಿ ತುಂಬಾ ವಿಳಂಬವಾಗಲಿದೆ ಎಂದು ಅವರು ಹೇಳಿದ್ದಾರೆ.

ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮೀಸಲಾತಿ ಕಲ್ಪಿಸುವ ಉದ್ದೇಶದ ಸಂವಿಧಾನ (128ನೇ ತಿದ್ದುಪಡಿ) ಮಸೂದೆ – 2023ಯಲ್ಲಿಯ ಆಗಿರುವ ತಪ್ಪುಗಳನ್ನು ಸರಿಪಡಿಸಲು ಮೂರು ತಿದ್ದುಪಡಿಗಳನ್ನು ಮಾಡಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.