ನವದೆಹಲಿ: ಭಾರತ ಮತ್ತು ಸೌದಿ ಅರೇಬಿಯಾ ನಡುವೆ ಸೋಮವಾರ ಇಂಧನ ಸಹಕಾರಕ್ಕೆ ಸಂಬಂಧಿಸಿ ದೀರ್ಘಕಾಲದ ಒಪ್ಪಂದಕ್ಕೆ ಅಂಕಿತ ಬೀಳುವ ನಿರೀಕ್ಷೆಯಿದೆ.

ಜಿ20 ಶೃಂಗಸಭೆಗೆ ಆಗಮಿಸಿದ್ದ ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅವರು ನವದೆಹಲಿಯಲ್ಲಿಯೇ ಇದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ದೊರೆ ಸಲ್ಮಾನ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಎರಡೂ ಕಡೆಯಿಂದ ಇಂಧನ ಸಹಕಾರ ಒಪ್ಪಂದಕ್ಕೆ ಸಹಿ ಬೀಳುವ ನಿರೀಕ್ಷೆಯಿದೆ. ಅಲ್ಲದೇ, ನವೀಕರಿಸಬಹುದಾದ ಇಂಧನ ಶಕ್ತಿ ಹಾಗೂ ಉಭಯ ದೇಶಗಳ ನಡುವೆ ಸಾಗರದೊಳಗೆ ವಿದ್ಯುತ್ ಜಾಲದ ಕೇಬಲ್ ಅಳವಡಿಕೆ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ‘ಪ್ರಜಾವಾಣಿ’ಗೆ ಮೂಲಗಳು ತಿಳಿಸಿವೆ.

ಎರಡೂ ದೇಶಗಳ ನಡುವಿನ ರಾಜಕೀಯ, ರಕ್ಷಣೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಹಕಾರಕ್ಕೆ ರಚಿಸಿರುವ ಸಮಿತಿಗಳು, ಆರ್ಥಿಕ ಹಾಗೂ ಹೂಡಿಕೆಯ ಸಹಕಾರಕ್ಕೆ ರಚಿಸಿರುವ ಸಮಿತಿಗಳಿಗೆ ಸಂಬಂಧಿಸಿದಂತೆ ದ್ವಿಪಕ್ಷೀಯ ಕಾರ್ಯತಂತ್ರ ಪಾಲುದಾರಿಕೆ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.