ಶ್ರೀನಗರ: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ದೇಶವು ಅತ್ಯಂತ ಜಾಗರೂಕವಾಗಿರಬೇಕು. ಅಲ್ಲದೆ, ಬಾಂಗ್ಲಾ ಪರಿಸ್ಥಿತಿಯನ್ನು ಬಹಳ ಎಚ್ಚರಿಕೆಯಿಂದ ಗಮನಿಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.

‘ಎಲ್ಲ ಸರ್ವಾಧಿಕಾರಿಗಳು ಬಾಂಗ್ಲಾದೇಶ ಎದುರಿಸುತ್ತಿರುವ ಪರಿಸ್ಥಿತಿಯನ್ನೇ ಎದುರಿಸಬೇಕಾಗುತ್ತದೆ ಎಂಬುದನ್ನು ನೆನಪಿನಲ್ಲಿಡಬೇಕು’ ಎಂದು ಅವರು ಹೇಳಿದ್ದಾರೆ.

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಮತ್ತು ಪಲಾಯನ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಾಂಗ್ಲಾದೇಶದಲ್ಲಿ ಹಲವು ವರ್ಷಗಳಿಂದ ಅಶಾಂತಿ ಇದೆ. ನಿರುದ್ಯೋಗವು ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಅಲ್ಲದೆ, ದೇಶದ ಆರ್ಥಿಕ ಸ್ಥಿತಿಯು ತುಂಬಾ ಕೆಟ್ಟದಾಗಿತ್ತು. ಈ ಎಲ್ಲಾ ವಿಷಯಗಳು ಸರ್ಕಾರದ ಪತನಕ್ಕೆ ಕಾರಣವಾಗಿದೆ’ ಎಂದು ಅವರು ಹೇಳಿದರು.

‘ನೆರೆಯ ದೇಶವು ಈ ಬಿಕ್ಕಟ್ಟನ್ನು ನಿವಾರಿಸುತ್ತದೆ ಮತ್ತು ಭಾರತದೊಂದಿಗೆ ಸೌಹಾರ್ದ ಸಂಬಂಧವನ್ನು ಉಳಿಸಿಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
.Bangladesh Unrest | ಬಾಂಗ್ಲಾದೇಶ ಸಂಸತ್ ವಿಸರ್ಜನೆ.Bangla Unrest | ಭಾರತೀಯ ಸಾಂಸ್ಕೃತಿಕ ಕೇಂದ್ರ ಧ್ವಂಸ: 4 ದೇಗುಲಗಳಿಗೆ ಹಾನಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.