ನವದೆಹಲಿ: ಖಾಲಿಸ್ತಾನ್ ಪರ ಪ್ರತ್ಯೇಕತಾವಾದಿಗಳು ಪ್ರತಿಭಟನೆ ವೇಳೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ಭಾರತ ಧ್ವಜವನ್ನು ಕೆಳಗಿಳಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ಭಾನುವಾರ ರಾತ್ರಿ ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಸುರಕ್ಷತೆ ಬಗ್ಗೆ ವಿವರಣೆ ಕೇಳಿದೆ.

ಲಂಡನ್‌ನಲ್ಲಿರುವ ಭಾರತೀಯ ರಾಜತಾಂತ್ರಿಕ ಸ್ಥಳಗಳು ಮತ್ತು ಸಿಬ್ಬಂದಿಯ ಭದ್ರತೆ ಬಗ್ಗೆ ಬ್ರಿಟನ್ ಸರ್ಕಾರದ ಉದಾಸೀನತೆ ‘ಸ್ವೀಕಾರಾರ್ಹವಲ್ಲ’ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಹೇಳಿಕೆಯಲ್ಲಿ ತಿಳಿಸಿದೆ.

ಧ್ವಜವನ್ನು ಕೆಳಗಿಳಿಸಿದ ಘಟನೆ ಕುರಿತು ದೆಹಲಿಯಲ್ಲಿರುವ ಬ್ರಿಟನ್ ಹೈಕಮಿಷನ್‌ನ ಅಧಿಕಾರಿಯನ್ನು ಎಂಇಎಗೆ ಕರೆಸಲಾಗಿದೆ. ಪ್ರತಿಭಟನಕಾರರಿಗೆ ಹೈಕಮಿಷನ್ ಆವರಣ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಭದ್ರತೆ ಲೋಪದ ಕುರಿತು ವಿವರಣೆ ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.