ಬೆಂಗಳೂರು: ಧಾರ್ಮಿಕ ಪೂಜಾ ಸ್ಥಳಗಳನ್ನು ಭಯೋತ್ಪಾದಕ ದಾಳಿಗಳಿಂದ ರಕ್ಷಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಭಾರತ ಕೆನಡಾ ಸರ್ಕಾರವನ್ನು ಕೋರಿದೆ.

ಕೆನಾಡದ ಬ್ರಾಂಪ್ಟನ್ನಲ್ಲಿ ಹಿಂದೂ ದೇವಾಲಯವೊಂದರಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ದಾಳಿ ನಡೆಸಿದ ಬೆನ್ನಲ್ಲೇ, ಭಾರತ ಸರ್ಕಾರ ಹೀಗೆ ಹೇಳಿದೆ.
.Video: ಕೆನಡಾ ಹಿಂದೂ ದೇವಾಲಯದ ಭಕ್ತರ ಮೇಲೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳ ದಾಳಿ.
‘ನಿನ್ನೆ ಒಂಟಾರಿಯೊದ ಬ್ರಾಂಪ್ಟನ್ನಲ್ಲಿರುವ ಹಿಂದೂ ಸಭಾ ದೇವಾಲಯದಲ್ಲಿ ಉಗ್ರಗಾಮಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ಎಲ್ಲಾ ಪೂಜಾ ಸ್ಥಳಗಳನ್ನು ಇಂತಹ ದಾಳಿಗಳಿಂದ ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನಾವು ಕೆನಡಾ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಹಿಂಸಾಚಾರದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ’ ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಂಧೀರ್ ಜೈಸ್ವಾಲ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
.ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೇ ದೀಪಾವಳಿ ಆಚರಿಸಿದ ಕೆನಡಾ ಪ್ರಧಾನಿ ಟ್ರುಡೊ.
ಬ್ರಾಂಪ್ಟನ್ನಲ್ಲಿ ಖಾಲಿಸ್ತಾನಿಗಳ ದಾಳಿಯ ಬಗ್ಗೆ ಮಾಧ್ಯಮಗಳು ಕೇಳುತ್ತಿರುವ ಪ್ರಶ್ನೆಗೆ ಈ ಪ್ರತಿಕ್ರಿಯೆ ಎಂದು ಅವರು ಬರೆದುಕೊಂಡಿದ್ದಾರೆ.

‘ಕೆನಡಾದಲ್ಲಿರುವ ಭಾರತದ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ನಾವು ಕಾಳಜಿ ಹೊಂದಿದ್ದೇವೆ. ಭಾರತೀಯರು ಮತ್ತು ಕೆನಡಾದ ನಾಗರಿಕರಿಗೆ ಸಮಾನವಾಗಿ ಸೇವೆಗಳನ್ನು ಒದಗಿಸಲು ನಮ್ಮ ರಾಯಭಾರ ಅಧಿಕಾರಿಗಳ ಕೆಲಸವನ್ನು ಯಾವುದೇ ಬೆದರಿಕೆ, ಕಿರುಕುಳ ಮತ್ತು ಹಿಂಸಾಚಾರದಿಂದ ತಡೆಯಲು ಆಗುವುದಿಲ್ಲ’ ಎಂದು ಹೇಳಿದ್ದಾರೆ.
.ಭಾರತ–ಕೆನಡಾ ವಿವಾದ: ಸಂಸದೀಯ ಸಮಿತಿಗೆ ಅ.6ರಂದು ವಿದೇಶಾಂಗ ಕಾರ್ಯದರ್ಶಿ ಮಾಹಿತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.