ರಾಂಚಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ ಮತ್ತು ಅದನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ನಾವು ಪಾಕಿಸ್ತಾನದ ಪಿತೂರಿಗೆ ತಕ್ಕ ಉತ್ತರ ನೀಡಲಿದ್ದೇವೆ’ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು (ಮಂಗಳವಾರ) ಮುಂಜಾನೆ ನಡೆದ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಭಾರಿ ಗುಂಡಿನ ಕಾಳಗದಲ್ಲಿ ಮೇಜರ್ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಜಾರ್ಖಂಡ್ನಲ್ಲಿರುವ ಈಗಿರುವ ಸರ್ಕಾರವನ್ನು ಕಿತ್ತೊಗೆದು ಬಿಜೆಪಿ ಮತ್ತೆ ಡಬಲ್ ಎಂಜಿನ್ ಸರ್ಕಾರ ರಚಿಸಲಿದೆ ಎಂದು ಅವರು ಹೇಳಿದ್ದಾರೆ.

ಜಾರ್ಖಂಡ್ ಬಿಜೆಪಿ ಘಟಕದ ಚುನಾವಣಾ ಸಹ–ಪ್ರಭಾರಿಯಾಗಿರುವ ಶರ್ಮಾ, ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮಗಳು ಮತ್ತು ವಿಜಯ ಸಂಕಲ್ಪ ಸಭೆಗಳಲ್ಲಿ ಭಾಗವಹಿಸಲು ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ.
.ಜಮ್ಮು | ದೋಡಾದಲ್ಲಿ ಗುಂಡಿನ ಕಾಳಗ: ನಾಲ್ವರು ಯೋಧರು ಹುತಾತ್ಮ.ಜಮ್ಮು | ದೋಡಾದಲ್ಲಿ ಭಯೋತ್ಪಾದಕ ದಾಳಿ: ಪ್ರಧಾನಿ ಮೋದಿಗೆ ಖರ್ಗೆ, ರಾಹುಲ್ ತರಾಟೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.