ನವದೆಹಲಿ: ಭಾರತ ಹಾಗೂ ಚೀನಾ ದೇಶದ ಯೋಧರು ವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಹಲವಾರು ಗಡಿ ಕೇಂದ್ರಗಳಲ್ಲಿ ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ.

ಪೂರ್ವ ಲಡಾಖ್ನಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಡೆಮ್ಚೋಕ್ ಮತ್ತು ಡೆಪ್ಸಾಂಗ್ ಬಯಲಿನಲ್ಲಿ ಎರಡೂ ದೇಶಗಳು ನಿಯೋಜಿಸಿದ್ದ ಸೇನೆಯನ್ನು ಹಿಂದಕ್ಕೆ ಪಡೆಯುವ ಕಾರ್ಯಾಚರಣೆ ಪೂರ್ಣಗೊಂಡ ಬೆನ್ನಲ್ಲೇ ಸಿಹಿ ವಿನಿಮಯ ಮಾಡಿಕೊಂಡಿದ್ದಾರೆ.

ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯ ಬಳಿ ಗಸ್ತು ನಡೆಸುವ ಮತ್ತು ಸೇನೆಯ ವಾಪಸಾತಿ ಸಂಬಂಧ ಉಭಯ ದೇಶಗಳ ನಡುವೆ ಏರ್ಪಟ್ಟ ಒಪ್ಪಂದದ ಅನುಸಾರ ಈ ಪ್ರಕ್ರಿಯೆ ನಡೆದಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತ ಮತ್ತು ಚೀನಾದ ಯೋಧರು ಬಾರ್ಡರ್ ಪರ್ಸನಲ್ ಮೀಟಿಂಗ್ (ಬಿಪಿಎಂ) ಕೇಂದ್ರಗಳಲ್ಲಿ ಪರಸ್ಪರ ಸಿಹಿ ಹಂಚಿಕೊಂಡಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.
.ಲಡಾಖ್: ಸೇನೆ ವಾಪಸಾತಿ ಪೂರ್ಣ, ಒಪ್ಪಂದ ಜಾರಿ ಯಶಸ್ವಿ.ಆಳ-ಅಗಲ | ಭಾರತ–ಚೀನಾ ಒಪ್ಪಂದ: ಗಡಿಯಲ್ಲಿ ನೆಲಸುವುದೇ ಶಾಂತಿ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.