ನವದೆಹಲಿ: ಕೇರಳದ ಸಮಾಜವಾದಿ ಪಕ್ಷದ (ಎಸ್‌ಪಿ) ಘಟಕವನ್ನು ವಿಸರ್ಜನೆ ಮಾಡಿರುವುದಾಗಿ ಪಕ್ಷ ಇಂದು (ಸೋಮವಾರ) ಪ್ರಕಟಿಸಿದೆ.

‘ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಕೇರಳದ ಸಮಾಜವಾದಿ ಪಕ್ಷದ ರಾಜ್ಯ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜೋ ಆಂಥೋನಿ ಅವರನ್ನು ಕೇರಳ ರಾಜ್ಯದ ವೀಕ್ಷಕರನ್ನಾಗಿ ನೇಮಿಸಲಾಗಿದೆ’ ಎಂದು ಸಮಾಜವಾದಿ ಪಕ್ಷ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದೇಶದ ಬೇರೆ ರಾಜ್ಯಗಳಲ್ಲಿ ‘ಇಂಡಿಯಾ’ ಮೈತ್ರಿಕೂಟದಲ್ಲಿರುವ ಎಡಪಕ್ಷಗಳು, ಕೇರಳದಲ್ಲಿ ಮಾತ್ರ ಸ್ವತಂತ್ರವಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದವು.

ಸಿಪಿಎಂ 15, ಸಿಪಿಐ 5 ಮತ್ತು ಕೆಸಿಎಂ 1 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದವು. ಇನ್ನೊಂದೆಡೆ ಯುಡಿಎಫ್ ಮೈತ್ರಿಕೂಟದಡಿ ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಐಎಂಯುಎಲ್ 2 ಮತ್ತು ಆರ್‌ಎಸ್‌ಪಿ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿತ್ತು. ರಾಷ್ಟ್ರಮಟ್ಟದಲ್ಲಿ ‘ಇಂಡಿಯಾ’ ಮೈತ್ರಿಕೂಟದಲ್ಲಿ ಇರುವ ಕಾಂಗ್ರೆಸ್ ಮತ್ತು ಎಡಪಕ್ಷಗಳು, ಕೇರಳದಲ್ಲಿ ಮಾತ್ರ ಪರಸ್ಪರರ ವಿರುದ್ಧ ಸೆಣಸಾಟ ನಡೆಸಿದ್ದವು. ಬಿಜೆಪಿ ಪ್ರತ್ಯೇಕವಾಗಿಯೇ ಸ್ಪರ್ಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.