ಪ್ರಧಾನಿ ಮಧ್ಯಪ್ರವೇಶಿಸಲಿ: ಐಎಂಎ
ಆರೋಗ್ಯ ಕಾರ್ಯಕರ್ತರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಆಸ್ಪತ್ರೆಗಳನ್ನು ‘ಸುರಕ್ಷಿತ ವಲಯ’ಗಳಾಗಿ ಘೋಷಿಸುವ ಸಂಬಂಧ ಕೇಂದ್ರ ಸರ್ಕಾರವು ಕಾನೂನು ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮನವಿ ಮಾಡಿದೆ. ‘ಆಸ್ಪತ್ರೆಗಳಲ್ಲಿನ ಭದ್ರತಾ ವ್ಯವಸ್ಥೆಯು ವಿಮಾನ ನಿಲ್ದಾಣಗಳಿಗಿಂತ ಕಡಿಮೆಯಿರಬಾರದು. ಕಡ್ಡಾಯ ಭದ್ರತಾ ಮಾನದಂಡಗಳೊಂದಿಗೆ ಆಸ್ಪತ್ರೆಗಳನ್ನು ಸುರಕ್ಷಿತ ವಲಯಗಳಾಗಿ ಘೋಷಿಸಬೇಕು’ ಎಂದು ಹೇಳಿದೆ.