ನವದೆಹಲಿ:ದೇಶದ 72 ನೇ ಗಣರಾಜ್ಯೋತ್ಸವವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಜಗತ್ತಿನ ಜನಪ್ರಿಯ ಸರ್ಚ್ ಎಂಜಿನ್ ಗೂಗಲ್ ಸಹ ಗಣರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದೆ.

ಭಾರತದ ಕಲೆ ಮತ್ತು ವಾಸ್ತುಶಿಲ್ಪ, ಸಾಂಸ್ಕೃತಿಕ ಮತ್ತು ಏಕತೆಯ ಪರಂಪರೆಯನ್ನು ಆಕರ್ಷಕ ಮತ್ತು ವರ್ಣಮಯ ಡೂಡಲ್‌ನಲ್ಲಿ ಗೂಗಲ್ ಸೆರೆಹಿಡಿದಿದೆ.

ಸುಂದರವಾದ ಡೂಡಲ್ ಕಲಾಕೃತಿಯಲ್ಲಿ ಕೆಂಪು ಕೋಟೆ ಸೇರಿ ದೇಶದ ಐತಿಹಾಸಿಕ ಕಟ್ಟಡಗಳು, ರಾಷ್ಟ್ರಧ್ವಜದಲ್ಲಿರುವ ಕೇಸರಿ, ಬಿಳಿ ಮತ್ತು ಹಸಿರು(ತ್ರಿವರ್ಣದ) ಬಣ್ಣಗಳ ಮುಂಭಾಗದಲ್ಲಿ ದೇಶದ ವಿವಿಧ ಸಂಸ್ಕೃತಿಯ ಜನರನ್ನು ಪ್ರದರ್ಶಿಸುತ್ತಿದೆ. ಗೂಗಲ್ ಕಂಪನಿಯ ಹೆಸರನ್ನು ನೀಲಿ ಬಣ್ಣದಲ್ಲಿ ಮಧ್ಯದಲ್ಲಿ ಅಲಂಕರಿಸಲಾಗಿದೆ,

ಈ ಹಿಂದೆ ಗೂಗಲ್ ರಿಲೀಸ್ ಮಾಡಿದ್ದ ಹೇಳಿಕೆಯಲ್ಲಿ "ಮುಂಬೈ ಮೂಲದ ಅತಿಥಿ ಕಲಾವಿದ ಓಂಕರ್ ಫೊಂಡೇಕರ್ ಇಂದಿನ ಡೂಡಲ್ ರಚಿಸಿದ್ದಾರೆ, 72 ವರ್ಷಗಳ ಹಿಂದೆ ಭಾರತೀಯ ಸಂವಿಧಾನವು ಜಾರಿಗೆ ಬಂದ ದಿನವನ್ನು ಸಂಸ್ಥೆ ಗೌರವಿಸುತ್ತದೆ . " ಎಂದು ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.