ನವದೆಹಲಿ: ಮೂಗಿನ ಮೂಲಕ ನೀಡಬಹುದಾದ ‘ಇನ್ಕೊವ್ಯಾಕ್’ ಕೋವಿಡ್ ಲಸಿಕೆಯನ್ನು ಕೇಂದ್ರದ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಗುರುವಾರ ಬಿಡುಗಡೆ ಮಾಡಿದರು.

ಭಾರತ್ ಬಯೊಟೆಕ್ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಈ ಲಸಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾರತ್ ಬಯೊಟೆಕ್ ಕಂಪನಿ ಕಂಪನಿಯ ಅಧ್ಯಕ್ಷ ಕೃಷ್ಣ ಎಲ್ಲಾ ಇದ್ದರು.

ಈ ಹಿಂದೆ, ಭಾರತೀಯ ಔಷಧ ನಿಯಂತ್ರಕ (ಡಿಸಿಜಿಐ) ಹಾಗೂ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್ಸಿಒ) ಲಸಿಕೆಯ ಟ್ರಯಲ್ಗೆ ಅನುಮೋದನೆ ನೀಡಿತ್ತು. ಇದೀಗ ಲಸಿಕೆ ಬಳಕೆಗೆ ಲಭ್ಯವಾಗಲಿದೆ ಎಂದು ಕಂಪನಿ ತಿಳಿಸಿದೆ.

ಪ್ರಾಥಮಿಕ ಸರಣಿ ಹಾಗೂ ಬೂಸ್ಟರ್ ಹಂತದಲ್ಲಿ ಬಳಸಲು ಅನುಮೋದನೆ ಪಡೆದ ಮೂಗಿನ ಮೂಲಕ ನೀಡಬಹುದಾದ ಮೊದಲ ಲಸಿಕೆ ಇದಾಗಿದೆ ಎಂದು ಭಾರತ್ ಬಯೊಟೆಕ್ ತಿಳಿಸಿದೆ. ಇದನ್ನು ದೇಶಿಯವಾಗಿ ತಯಾರಿಸಲಾಗಿದೆ ಎಂದು ಕಂಪನಿ ಹೇಳಿದೆ.

ದೆಹಲಿಯ ಎಐಐಎಂಎಸ್ ಸೇರಿದಂತೆ ದೇಶದ ಆಯ್ದ ಐದು ಕೇಂದ್ರಗಳಲ್ಲಿ ಈ ಲಸಿಕೆಯ ಕ್ಲಿನಿಕಲ್ ಟ್ರಯಲ್ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.