ನವದೆಹಲಿ: ಭಾರತದ ಚೊಚ್ಚಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು 2024ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ಉಡಾವಣೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಪ್ರಧಾನ ಮಂತ್ರಿಗಳ ಕಚೇರಿಯ (ಪಿಎಂಒ) ರಾಜ್ಯ ಸಚಿವ ಜಿತೇಂದ್ರ ಸಿಂಗ್ ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ.

ಈ ಯೋಜನೆಗೆ ಗಗನಯಾನಿಗಳನ್ನು ಗುರುತಿಸಲಾಗಿದ್ದು, ಅವರಿಗೆ ಬಾಹ್ಯಾಕಾಶ ಯೋಜನೆಗೆ ಸಂಬಂಧಿಸಿದ ನಿರ್ದಿಷ್ಟ ತರಬೇತಿಯನ್ನು ಬೆಂಗಳೂರಿನಲ್ಲಿ ನೀಡಲಾಗುತ್ತಿದೆ ಎಂದು ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಗಗನಯಾನಿಗಳ ಸುರಕ್ಷತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ ಎಂದಿರುವ ಅವರು, ಈ ಕಾರಣಕ್ಕಾಗಿಯೇ ಮಾನವ ಸಹಿತ ಗಗನಯಾನಕ್ಕೂ ಮುನ್ನ ಎರಡು ಪರೀಕ್ಷಾ ವಾಹನಗಳ ಪ್ರಾತ್ಯಕ್ಷಿಕೆ ಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸಿಬ್ಬಂದಿ ರಹಿತ ‘ಗಗನಯಾನ 1’ ಯೋಜನೆ 2023ರ ಮೊದಲ ತ್ರೈಮಾಸಿಕದಲ್ಲಿ ಹಾಗೂ ಸಿಬ್ಬಂದಿ ರಹಿತ ‘ಗಗನಯಾನ 2’ ಯೋಜನೆಯನ್ನು 2024ರ ಎರಡನೇ ತ್ರೈಮಾಸಿಕದಲ್ಲಿ ಉಡಾವಣೆ ಮಾಡುವ ಗುರಿ ಹೊಂದಲಾಗಿದೆ. ಬಳಿಕ ಅಂತಿಮವಾಗಿ ಮಾನವ ಸಹಿತ ಬಾಹ್ಯಾಕಾಶ ಯಾನ ‘ಎಚ್1’ ಯೋಜನೆಯನ್ನು 2024ರ ನಾಲ್ಕನೇ ತ್ರೈಮಾಸಿಕದಲ್ಲಿ ಉಡಾವಣೆ ಮಾಡುವ ಯೋಜನೆಯಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.