ನಾಗ್ಪುರ: ಇಂಡಿಗೊ ವಿಮಾನದ ಪೈಲಟ್ ಒಬ್ಬರು ಬೋರ್ಡಿಂಗ್ ಗೇಟ್ ಬಳಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ಯಾಪ್ಟನ್ ಮನೋಜ್ ಸುಬ್ರಮಣ್ಯಂ (40) ಮೃತ ಪೈಲಟ್. ಇವರು ಮಧ್ಯಾಹ್ನ 12ರ ಹೊತ್ತಿಗೆ ನಾಗ್ಪುರದಿಂದ ಪುಣೆಗೆ ಹೊರಟಿದ್ದ ವಿಮಾನದಲ್ಲಿ ಕಾರ್ಯನಿರ್ವಹಿಸಲು ತೆರಳುತ್ತಿದ್ದರು. ಈ ವೇಳೆ ಭದ್ರತಾ ವಲಯದಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ. ಪ್ರಾಥಮಿಕ ವರದಿ ಪ್ರಕಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂಬುದಾಗಿ ಇಂಡಿಗೊ ಹೇಳಿಕೆಯಲ್ಲಿ ತಿಳಿಸಿದೆ.

ಪೈಲಟ್ ಹಠಾತ್ ನಿಧನಕ್ಕೆ ಇಂಡಿಗೊ ಸಂತಾಪ ಸೂಚಿಸಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.