ನವದೆಹಲಿ (ಪಿಟಿಐ): ‘ಬೋರ್ಡಿಂಗ್ ಪ್ರಕ್ರಿಯೆ ವೇಳೆ ಪ್ರಯಾಣಿಕನೊಬ್ಬ ಆಕಸ್ಮಿಕವಾಗಿ ಇಂಡಿಗೊ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದಿದ್ದು, ಇದು ಗಮನಕ್ಕೆ ಬಂದ ಕೂಡಲೇ ಎಂಜಿನಿಯರ್‌ಗಳು ಪರಿಶೀಲನೆ ನಡೆಸಿ ಅದನ್ನು ಸರಿಪಡಿಸಿದ್ದಾರೆ. ಬಳಿಕ ವಿಮಾನವು ತಿರುಚಿನಾಪಳ್ಳಿಗೆ ಹಾರಾಟ ನಡೆಸಿದೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೋದ ವರ್ಷದ ಡಿಸೆಂಬರ್ 10 ರಂದು ಘಟನೆ ನಡೆದಿದೆ’ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.

‘6ಇ 7339 ಸಂಖ್ಯೆಯ ವಿಮಾನವು ಚೆನ್ನೈನಿಂದ ತಿರುಚಿನಾಪಳ್ಳಿಗೆ ಹೊರಡಲು ಸಿದ್ಧವಾಗಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ಆಕಸ್ಮಿಕವಾಗಿ ತುರ್ತು ನಿರ್ಗಮನ ದ್ವಾರ ತೆರೆದಿದ್ದರು. ಅದಕ್ಕಾಗಿ ತಕ್ಷಣವೇ ಕ್ಷಮೆಯನ್ನೂ ಕೋರಿದ್ದರು. ಬಳಿಕ ಎಂಜಿನಿಯರ್‌ಗಳು ಪರಿಶೀಲನೆ ನಡೆಸಿ ವಿಮಾನ ಹಾರಾಟಕ್ಕೆ ಹಸಿರು ನಿಶಾನೆ ತೋರಿದ್ದರು’ ಎಂದು ಇಂಡಿಗೊ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ತಮ್ಮದು ರೌಡಿ, ಗೂಂಡಾಗಳ ಪಕ್ಷವೆಂದು ಬಿಜೆಪಿಯವರೇ ಒಪ್ಪಿದ್ದಾರೆ: ಸುರ್ಜೆವಾಲಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.