ನಾಗ್ಪುರ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಜಬಲ್‌ಪುರದಿಂದ ತೆಲಂಗಾಣದ ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೊ ವಿಮಾನವನ್ನು ನಾಗ್ಪುರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘6E-7308 ಇಂಡಿಗೊ ವಿಮಾನವು ಜಬಲ್‌ಪುರದಿಂದ ಹೈದರಾಬಾದ್‌ಗೆ ತೆರಳುತ್ತಿತ್ತು. ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದರಿಂದ ಕೂಡಲೇ ವಿಮಾನವನ್ನು ನಾಗ್ಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾವಣೆ ಮಾಡಲಾಯಿತು’ ಎಂದು ಇಂಡಿಗೊ ಏರ್‌ಲೈನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

‘ನಾಗ್ಪುರ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ, ತ್ವರಿತಗತಿಯಲ್ಲಿ ತಪಾಸಣೆ ನಡೆಸಲಾಯಿತು. ಬಾಂಬ್ ಇರಿಸಲಾಗಿದೆ ಎಂದು ಬರೆದಿರುವ ಕಾಗದವು ವಿಮಾನದ ಸ್ನಾನಗೃಹದಲ್ಲಿ ಪತ್ತೆಯಾಗಿದೆ. ಭದ್ರತಾ ಏಜೆನ್ಸಿಗಳ ಸಂಪೂರ್ಣ ಪರಿಶೀಲನೆಯ ಬಳಿಕ ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.