ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ, ತಮ್ಮ ವಿರುದ್ಧ ದಾಖಲಾಗಿರುವ ಮತ್ತೊಂದು ಮೊಕದ್ದಮೆಯನ್ನು ವಜಾ ಮಾಡಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ಈಚೆಗೆ ಅವರಿಗೆ ಜಾಮೀನು ನೀಡಿತ್ತು. ಜೈಲಿನಲ್ಲಿದ್ದಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ದಾಂದಲೆ ನಡೆಸಿದ ಆರೋಪದಡಿ ದಾಖಲಿಸಿರುವ ಮೊಕದ್ದಮೆ ರದ್ದು ಕೋರಿ ಈಗ ಅರ್ಜಿ ಸಲ್ಲಿಸಿದ್ದಾರೆ.

ವಕೀಲರಾದ ಸಾನಾ ರಾಯಿಸ್ ಖಾನ್ ಮೂಲಕ ಮೇ 19ರಂದು ಅರ್ಜಿ ಸಲ್ಲಿಸಿದ್ದಾರೆ. ಬೈಕುಲ್ಲಾ ಜೈಲಿನಲ್ಲಿದ್ದಾಗ ದಾಂದಲೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಬಗ್ಗೆ ಮುಂಬೈ ಪೊಲೀಸರು ಜೂನ್ 24, 2017ರಂದು ಮೊಕದ್ದಮೆ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.