ಶ್ರೀನಗರ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಗುಪ್ತಚರ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಹೆಚ್ಚುವರಿ ಡಿಜಿಪಿ ಆನಂದ್ ಜೈನ್ ತಿಳಿಸಿದ್ದಾರೆ.

ಗುಪ್ತಚರ ಸಂಸ್ಥೆಗಳು, ಭಾರತೀಯ ಸೇನೆ, ಬಿಎಸ್ಎಫ್, ಸಿಆರ್ಪಿಎಫ್ ಮತ್ತು ನಾಗರಿಕ ಆಡಳಿತದ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಗಣರಾಜ್ಯೋತ್ಸವದ ಭದ್ರತಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ಜೈನ್, ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಮೇಲ್ವಿಚಾರಣಾ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ದೇಶ ವಿರೋಧಿಗಳು ಎಸಗುವ ದುಷ್ಕೃತ್ಯಗಳನ್ನು ವಿಫಲಗೊಳಿಸಲು ಮತ್ತು ಗಣರಾಜ್ಯೋತ್ಸವದ ಆಚರಣೆಗಳನ್ನು ಸುಗಮವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಸಂಸ್ಥೆಗಳು ಸಮನ್ವಯತೆ ಕಾಪಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಗಣರಾಜ್ಯೋತ್ಸವದ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಲಾಗುವುದು. ಜತೆಗೆ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಸುತ್ತಮುತ್ತ ಸಾಕಷ್ಟು ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜೈನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.