ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ.

ಚಿದಂಬರಂ ಅವರಿಗೆ ಜಾಮೀನು ನೀಡಿದಲ್ಲಿ ಅವರು, ಪ್ರಕರಣದ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದನ್ನು ಅಲ್ಲಗಳೆಯಲಾಗದು. ಕಾಂಗ್ರೆಸ್‌ನಲ್ಲಿ ಪ್ರಭಾವಿ ರಾಜಕಾರಣಿಯಾಗಿರುವ ಚಿದಂಬರಂ ಗೃಹ ಮತ್ತು ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಅವರೀಗ ಹಾಲಿ ಸಂಸತ್ ಸದಸ್ಯರೂ ಮತ್ತು ದೀರ್ಘಕಾಲದಿಂದ ವಕೀಲರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ನ್ಯಾಯಮೂರ್ತಿ ಸುರೇಶ್ ಕೈತ್ ಅಭಿಪ್ರಾಯಪಟ್ಟಿದ್ದಾರೆ.

ಆಗಸ್ಟ್ 21ರಂದು ಸಿಬಿಐ ಚಿದಂಬರಂ ಅವರನ್ನು ಬಂಧಿಸಿತ್ತು.

ಜಾಮೀನು ನಿರಾಕರಣೆಯ ಬಗ್ಗೆ ಉಲ್ಲೇಖಿಸಿದ ಕೋರ್ಟ್, ಸಿಬಿಐನ ತನಿಖೆ ಪ್ರಗತಿಯಲ್ಲಿದ್ದು, ಈ ಹಂತದಲ್ಲಿ ಚಿದಂಬರಂ ಅವರನ್ನು ಬಿಡುಗಡೆ ಮಾಡುವುದರಿಂದ ಸಾಕ್ಷ್ಯಾಧಾರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.