ನವದೆಹಲಿ:ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಕಾಂಗ್ರೆಸ್ನ ಹಿರಿಯ ನಾಯಕ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿಯೂ ಹಿನ್ನಡೆಯಾಗಿದೆ.

ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿ ಸೋಮವಾರ ತಿರಸ್ಕೃತಗೊಂಡಿದೆ.

ಇದನ್ನೂ ಓದಿ:ಐಎನ್ಎಕ್ಸ್ ಮೀಡಿಯಾ ಪ್ರಕರಣ: ಸಿಬಿಐನಿಂದ ಚಿದಂಬರಂ ಸೆರೆ

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಬಾನುಮತಿ ಮತ್ತು ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠವು ಚಿದಂಬರಂ ಅವರು ಈಗಾಗಲೇ ಸಿಬಿಐ ವಶದಲ್ಲಿರುವುದರಿಂದ ಅರ್ಜಿ ಮಹತ್ವ ಕಳೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಕಾನೂನಿನ ಅನುಸಾರ ಪರಿಹಾರ ಪಡೆಯಲು ಚಿದಂಬರಂ ಸ್ವತಂತ್ರರಾಗಿದ್ದಾರೆ ಎಂದೂ ಹೇಳಿದೆ.

ಚಿದಂಬರಂ ಅವರ ಕಸ್ಟಡಿ ಅವಧಿ ಇಂದು ಮುಕ್ತಾಯಗೊಳ್ಳಲಿದ್ದು, ಅವರನ್ನುಸಿಬಿಐ ಕೋರ್ಟ್ಗೆ ಹಾಜರುಪಡಿಸಲಿದೆ. ಈ ವೇಳೆ ಇನ್ನೂ ಕೆಲ ದಿನಗಳ ಮಟ್ಟಿಗೆ ವಶಕ್ಕೆ ಒಪ್ಪಿಸುವಂತೆ ಸಿಬಿಐ ಮನವಿ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ:26ರವರೆಗೆ ಚಿದಂಬರಂ ಬಿಡುಗಡೆ ಇಲ್ಲ

ಸದ್ಯ, ಜಾರಿ ನಿರ್ದೇಶನಾಲಯದಿಂದ (ಇ.ಡಿ) ಚಿದಂಬರಂ ಬಂಧನಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಚಿದಂಬರಂ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕಳೆದ ವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿತ್ತು. ಬಳಿಕ ಬುಧವಾರ ರಾತ್ರಿ ಸಿಬಿಐ ಅವರನ್ನು ಬಂಧಿಸಿತ್ತು.

ಇನ್ನಷ್ಟು...

ಚಿದಂಬರಂ, ಕಾರ್ತಿ ಹಾಗೂ ಐಎನ್ಎಕ್ಸ್: ಏನಿದು ಹಗರಣ?

ಚಿದಂಬರಂ ಸೆರೆ: ರಾಜಕೀಯ ತಿಕ್ಕಾಟ

ಚಿದಂಬರಂ ಬಂಧನ: ಪ್ರಕ್ರಿಯೆಯೂ ನಿಯಮಬದ್ಧವಾಗಿಯೇ ಇರಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.