ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಗೌರವಾರ್ಥ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

'ಶೋಕಾಚರಣೆಯ ದಿನದಂದು, ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಭಾರತದಾದ್ಯಂತ ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ಯಾವುದೇ ಅಧಿಕೃತ ಕಾರ್ಯಕ್ರಮ ಇರುವುದಿಲ್ಲ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇರಾನ್ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಭಾನುವಾರ ಅಜೆರ್ ಬೈಜಾನ್ ಪ್ರಾಂತ್ಯದ ಗಡಿಯ ಗುಡ್ಡಪ್ರದೇಶಗಳ ವ್ಯಾಪ್ತಿಯಲ್ಲಿ ಅಪಘಾತಕ್ಕೀಡಾಗಿತ್ತು. ಹೆಲಿಕಾಪ್ಟರ್ ಅಪಘಾತದಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ವ್ಯವಹಾರಗಳ ಸಚಿವ ಅಮಿರ್ ಅಬ್ದೊಲ್ಲಾಹಿಯಾನ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದರು.
.ಹೆಲಿಕಾಪ್ಟರ್ ಅಪಘಾತ | ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಸಚಿವ ಅಮೀರ್ ಸಾವು.
'ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರ ಮೇ 21 ರಂದು (ಮಂಗಳವಾರ) ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ' ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
.ಇರಾನ್ ಅಧ್ಯಕ್ಷರಿದ್ದ ಹೆಲಿಕಾಪ್ಟರ್ ಅಪಘಾತ: ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.