ನವದೆಹಲಿ:ಐಆರ್ಸಿಟಿಸಿ (ಭಾರತೀಯ ರೈಲ್ವೆ ಆಹಾರ ವಿತರಣೆ ಮತ್ತು ಪ್ರವಾಸೋದ್ಯಮ ನಿಗಮ) ಹೋಟೆಲ್ ಹಗರಣಕ್ಕೆ ಸಂಬಂಧಿಸಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಜನವರಿ 19ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಲಾಲು ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳು ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿವೆ.

ಬೇರೊಂದು ಪ್ರಕರಣದಲ್ಲಿ ಜೈಲಿನಲ್ಲಿರುವ ಲಾಲು ಅವರು ರಾಂಚಿಯ ಜೈಲಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ವಿಚಾರಣೆ ಎದುರಿಸಿದರು. ಈ ವೇಳೆ, ಲಾಲು ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳಿಗೆ ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್ ಸೂಚಿಸಿದರು.

ಖಾಸಗಿ ಸಂಸ್ಥೆಯೊಂದಕ್ಕೆಐಆರ್ಸಿಟಿಸಿಯಎರಡು ಹೋಟೆಲ್ಗಳ ಕಾರ್ಯನಿರ್ವಹಣೆ ಗುತ್ತಿಗೆ ನೀಡುವಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಸಿಬಿಐ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಲಾಲು ಅವರ ಪತ್ನಿ ರಾಬ್ಡಿ ದೇವಿ, ಮಗ ತೇಜಸ್ವಿ ಯಾದವ್ಗೆ ನ್ಯಾಯಾಲಯ ಈಗಾಗಲೇ ಜಾಮೀನು ನೀಡಿದೆ. ಇವರಿಬ್ಬರಿಗೂ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿ ನೀಡಲಾಗಿರುವ ಮಧ್ಯಂತರ ಜಾಮೀನನ್ನು ಜನವರಿ 19ರವರೆಗೆ ವಿಸ್ತರಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.