ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ 37ನೇ ಪುಣ್ಯತಿಥಿಯ ಅಂಗವಾಗಿ ಕಾಂಗ್ರೆಸ್ ನಾಯಕರು ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿದೆ.

ಇಂದಿರಾ ಗಾಂಧಿ ಅವರ ಸ್ಮಾರಕ ‘ಶಕ್ತಿ ಸ್ಥಳ’ ದಲ್ಲಿ ಪುಷ್ಪನಮನ ಸಲ್ಲಿಸಲಾಯಿತು. ಇಂದಿರಾ ಅವರು ಮಹಿಳಾ ಶಕ್ತಿಗೆ ಉತ್ತಮ ಉದಾಹರಣೆಯಾಗಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಬಣ್ಣಿಸಿದ್ದಾರೆ.

‘ಕೊನೆಯ ಗಳಿಗೆಯವರೆಗೂ ನನ್ನ ಅಜ್ಜಿ ದೇಶಕ್ಕೆ ನಿರ್ಭೀತಿಯಿಂದ ಸೇವೆ ಸಲ್ಲಿಸಿದ್ದಾರೆ. ಅವರ ಜೀವನವು ನಮಗೆ ಸ್ಪೂರ್ತಿಯ ಸೆಲೆಯಾಗಿದೆ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

‘ಇಂದಿರಾ ಗಾಂಧಿ ಅವರು ಸಾಮರ್ಥ್ಯವನ್ನು ಪ್ರತಿನಿಧಿಸಿದರು, ತ್ಯಾಗವನ್ನು ಪ್ರತಿಫಲಿಸಿದರು, ಸೇವೆಯನ್ನು ಪ್ರತಿಪಾದಿಸಿದರು. ಭಾರತದ ಉಕ್ಕಿನ ಮಹಿಳೆ, ಭಾರತದ ಮೊದಲ ಮಹಿಳಾ ಪ್ರಧಾನಿ, ನಿಜವಾದ ಭಾರತ ರತ್ನವಾದ ಅವರಿಗೆ ಅವರ ಪುಣ್ಯತಿಥಿಯಂದು ಶತಕೋಟಿ ನಮನಗಳು’ ಎಂದು ಕಾಂಗ್ರೆಸ್ ತನ್ನ ಅಧಿಕೃತ ಟ್ವೀಟ್ ಖಾತೆಯಲ್ಲಿ ಗೌರವ ಸಲ್ಲಿಸಿದೆ.

ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ 1984ರಲ್ಲಿ ಇದೇ ದಿನ ತಮ್ಮ ಇಬ್ಬರು ಭದ್ರತಾ ಸಿಬ್ಬಂದಿಯಿಂದ ಹತ್ಯೆಗೀಡಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.