ಕೊಯಮತ್ತೂರು: ತಮಿಳುನಾಡು ದೇವಾಲಯಗಳ ಹಣಕಾಸು, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಾಹ್ಯ ಲೆಕ್ಕಪರಿಶೋಧನೆ ನಡೆಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಈಶಾ ಫೌಂಡೇಷನ್ ಸಂಸ್ಥಾಪಕ, ಅಧ್ಯಾತ್ಮ ಗುರು ಸದ್ಗುರು ಜಗ್ಗಿ ವಾಸುದೇವ್ ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಇದೇ ವೇಳೆ , ಸಮುದಾಯ ನಿರ್ವಹಣೆಗಾಗಿ ಯಾವ್ಯಾವ ದೇವಾಲಯಗಳನ್ನು ಹಂಚಿಕೆ ಮಾಡಲಾಗಿದೆ ಎಂಬುದನ್ನು ಪರಿಶೀಲಿಸಲು ಆಯೋಗವೊಂದನ್ನು ರಚಿಸುವಂತೆ ಅವರು ಮನವಿ ಮಾಡಿದ್ದಾರೆ ಎಂದು ಫೌಂಡೇಷನ್ ಶನಿವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಶುಕ್ರವಾರ ಸಲ್ಲಿಸಿದ ಪಿಐಎಲ್‌ನಲ್ಲಿ ತಮಿಳುನಾಡು ರಾಜ್ಯ ಸರ್ಕಾರ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನು (ಎಚ್‌ಆರ್ ಮತ್ತು ಸಿಇ) ಮೊದಲ ಮತ್ತು ಎರಡನೆಯ ಪ್ರತಿವಾದಿಗಳೆಂದು ಉಲ್ಲೇಖಿಸಲಾಗಿದೆ.

ದೇವಾಲಯಗಳ ಬಾಹ್ಯ ಲೆಕ್ಕಪರಿಶೋಧನೆ ಕೋರಿ ಸರ್ಕಾರಕ್ಕೆ ಪದೇ ಪದೇ ಮನವಿ ಸಲ್ಲಿಸಲಾಗಿತ್ತು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಜಗ್ಗಿ ವಾಸುದೇವ್ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಅರ್ಜಿದಾರರು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ 44,000ಕ್ಕೂ ಹೆಚ್ಚು ದೇವಾಲಯಗಳ ಬಾಹ್ಯ ಲೆಕ್ಕಪರಿಶೋಧನೆ ನಡೆಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ ಎಂದೂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ... ಯಮುನಾ ನದಿಯಲ್ಲಿ ನೀರಿನ ಮಟ್ಟ ಕುಸಿತ: ದೆಹಲಿಯಲ್ಲಿ ಕುಡಿಯುವ ನೀರಿಗೆ ತೊಂದರೆ ಆತಂಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.