ನವದೆಹಲಿ: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತಾಂತ್ರಿಕ ಅಡಚಣೆಗೆ ಸಂಬಂಧಿಸಿದಂತೆ ಐಟಿ ಸಚಿವಾಲಯವು ಟೆಕ್ ದೈತ್ಯ ಮೈಕ್ರೋಸಾಫ್ಟ್ನೊಂದಿಗೆ ಸಂಪರ್ಕದಲ್ಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಮೈಕ್ರೋಸಾಫ್ಟ್ ಸೇವೆಗಳಲ್ಲಿ ಉಂಟಾಗಿರುವ ತಾಂತ್ರಿಕ ಅಡಚಣೆಯಿಂದಾಗಿ ರಾಷ್ಟ್ರೀಯ ಮಾಹಿತಿ ಕೇಂದ್ರದ (ಎನ್ಐಸಿ) ಕಾರ್ಯಾಚರಣೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಅವರು ತಿಳಿಸಿದ್ದಾರೆ.

ತಾಂತ್ರಿಕ ಅಡಚಣೆಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಲಾಗಿದೆ. ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ‘ಎಕ್ಸ್’ನಲ್ಲಿ ಮಾಹಿತಿ ನೀಡಿದ್ದಾರೆ.

ಮೈಕ್ರೋಸಾಫ್ಟ್ನ ಸೇವೆಗಳಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಭಾರತ, ಅಮೆರಿಕ ಸೇರಿದಂತೆ ಇತರೆ ದೇಶಗಳಲ್ಲಿ ತೀವ್ರ ಅಡಚಣೆ ಉಂಟಾಗಿದೆ. ವಿಮಾನ ನಿಲ್ದಾಣಗಳು, ವಿಮಾನ ಸೇವೆಗಳು, ಷೇರುಪೇಟೆ ಸೇರಿದಂತೆ ಎಲ್ಲಾ ರೀತಿಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.
.ಮೈಕ್ರೊಸಾಫ್ಟ್ ದಿಢೀರ್ ಸ್ಥಗಿತ: ಐ.ಟಿ, ಬ್ಯಾಂಕ್, ಮಾಧ್ಯಮ ಸೇವೆಗೆ ತೊಂದರೆ.ಮೈಕ್ರೋಸಾಫ್ಟ್ನ ಜಾಗತಿಕ ತಾಂತ್ರಿಕ ಅಡಚಣೆಗೆ ಕಾರಣ ಏನು?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.