ಕೊಚ್ಚಿ: ಆನೆದಂತಗಳನ್ನು ಅಕ್ರಮವಾಗಿ ಹೊಂದಿದ್ದ ಆರೋಪದಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತನಟ ಮೋಹನ್ ಲಾಲ್ ಅವರ ವಿರುದ್ಧದ ಪ್ರಕರಣವನ್ನು ಕೈಬಿಡುವಂತೆ ಕೇರಳ ಸರ್ಕಾರ ಕೋರಿದ್ದ ಮನವಿಯನ್ನು ಇಲ್ಲಿನ ವಿಚಾರಣಾ ನ್ಯಾಯಾಲಯವು ತಿರಸ್ಕರಿಸಿದೆ.

ಹಾಗಾಗಿ, ಲಾಲ್ ಅವರು ಪ್ರಕರಣದ ವಿಚಾರಣೆಯನ್ನು ಎದುರಿಸಬೇಕಾಗಿದೆ.

‘ಸದ್ಯಕ್ಕೆ ಅರ್ಜಿಯನ್ನು ಹಿಂಪಡೆಯಲು ನ್ಯಾಯಾಲಯವು ಸಮ್ಮತಿಸುವುದಿಲ್ಲ’ ಎಂದು ನ್ಯಾಯಾಂಗ ಪ್ರಥಮದರ್ಜೆ ಮ್ಯಾಜಿಸ್ಟ್ರೇಟ್ ಅಂಜು ಕ್ಲೀಟಸ್ ಅವರು ಹೇಳಿದ್ದಾರೆ.

2012ರ ಜೂನ್‌ನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಲಾಲ್ ಮನೆ ಮೇಲೆ ದಾಳಿ ನಡೆಸಿದಾಗ ನಾಲ್ಕು ಆನೆ ದಂತಗಳನ್ನು ವಶಪಡಿಸಿಕೊಳ್ಳಲಾಗಿತ್ತು. ವನ್ಯಜೀವಿ ಅಪರಾಧ ಕಾಯ್ದೆಯಡಿ ನಟನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.