ರಾಂಚಿ: ಬಹುಕೋಟಿ ಮೇವು ಹಗರಣ ಕುರಿತ ದುಮ್ಕಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಶನಿವಾರ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರಿಗೆ ಜಾಮೀನು ನೀಡಿದೆ.

ನ್ಯಾಯಮೂರ್ತಿ ಅಪರೇಶ್ ಕುಮಾರ್ ಸಿಂಗ್ ಜಾಮೀನು ನೀಡಿದ್ದು, ಇದು ಲಾಲು ಪ್ರಸಾದ್ ಜೈಲಿನಿಂದ ಹೊರಬರುವ ಹಾದಿಯನ್ನು ಸುಗಮಗೊಳಿಸಿದೆ.

ಜಾಮೀನು ಅವಧಿಯಲ್ಲಿ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳಬಾರದು. ವಿಳಾಸ ಅಥವಾ ಮೊಬೈಲ್ ಸಂಖ್ಯೆ ಬದಲಿಸಬಾರದು ಎಂದು ಕೋರ್ಟ್ ಸೂಚಿಸಿದೆ. ಇದೇ ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಇತರೆ ಮೂರು ಪ್ರಕರಣದಲ್ಲಿ ಅವರು ಈಗಾಗಲೇ ಜಾಮೀನು ಪಡೆದಿದ್ದರು. ದುಮ್ಕಾ ಖಜಾನೆಯಿಂದ 90ರ ದಶಕದಲ್ಲಿ ಕಾನೂನುಬಾಹಿರವಾಗಿ ₹ 3.13 ಕೋಟಿ ಪಡೆದಿದ್ದ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.