ನವದೆಹಲಿ: ತನಗೆ ಸಂಬಂಧಿಸಿದ ನೇರ ಹಾಗೂ ಪರೋಕ್ಷ ವಿಚಾರಗಳನ್ನು ಸುಖೇಶ್ ಚಂದ್ರಶೇಖರ್ ಯಾವುದೇ ಮಾಧ್ಯಮಗಳಿಗೆ ನೀಡುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಈ ಕುರಿತು ನ್ಯಾಯಾಲಯವು, ದೆಹಲಿಯ ಮಾಂಡೋಲಿ ಜೈಲು ಅಧೀಕ್ಷಕರಿಗೆ ಹಾಗೂ ಪ್ರಕರಣದ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗಕ್ಕೆ ನಿರ್ದೇಶನ ನೀಡಬೇಕು ಎಂದು ನಟಿ ಮನವಿ ಮಾಡಿಕೊಂಡಿದ್ದಾರೆ.

‘ಸುಖೇಶ್ ಚಂದ್ರಶೇಖರ್ ತನ್ನ ಬಗ್ಗೆ ಮಾಧ್ಯಮಗಳಿಗೆ ನೀಡುತ್ತಿರುವ ಹೇಳಿಕೆಗಳಿಂದ ನನಗೆ ಸಂಕಟದ ವಾತಾವರಣ ಸೃಷ್ಟಿಯಾಗಿದೆ. ಇದದರಿಂದ ನನ್ನ ಭವಿಷ್ಯಕ್ಕೂ ಧಕ್ಕೆ ಉಂಟಾಗುತ್ತಿದೆ. ಹೀಗಾಗಿ ಆತ ಯಾವುದೇ ಹೇಳಿಕೆಗಳನ್ನು ಯಾವುದೇ ಮಾಧ್ಯಮಗಳಿಗೆ ಬಿಡುಗಡೆ ಮಾಡದಿರಲು ಕ್ರಮ ಕೈಗೊಳ್ಳಬೇಕು’ ಎಂದು ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಜಾಕ್ವೆಲಿನ್ ಮನವಿ ಮಾಡಿಕೊಂಡಿದ್ದಾರೆ.

ಅಲ್ಲದೇ ಮನವಿಯಲ್ಲಿ ನಟಿ, ಸುಖೇಶ್ ಚಂದ್ರಶೇಖರ್ ವಿರುದ್ಧದ ಪ್ರಕರಣದಲ್ಲಿ ತನ್ನ ಮೇಲಿನ ಎಫ್ಐಆರ್ ಅನ್ನು ರದ್ದು ಮಾಡಬೇಕೆಂದು ಮತ್ತೊಮ್ಮೆ ಕೇಳಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್ಥಿಕ ಅಪರಾಧಗಳ ವಿಭಾಗ, ಇದೊಂದು ಗಂಭೀರ ವಿಚಾರ. ಪ್ರಮುಖ ಸಾಕ್ಷಿಗೆ ಆರೋಪಿಯಿಂದ ಬೆದರಿಕೆ ಹಾಕುತ್ತಿರುವುದು ಕಳವಳಕಾರಿ ಸಂಗತಿ. ಇದು ವಿಚಾರಣೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಪ್ರಕರಣದ ಹಿನ್ನೆಲೆ

ಉದ್ಯಮಿಯೊಬ್ಬರಿಗೆ ₹200 ಕೋಟಿ ವಂಚನೆ ಪ್ರಕರಣ ಸಂಬಂಧ ಸುಖೇಶ್ ಚಂದ್ರಶೇಖರ್ ಜೈಲಿನಲ್ಲಿದ್ದಾನೆ. ಇದೇ ಹಣದಲ್ಲಿ ಸುಖೇಶ್ನಿಂದ ಜಾಕ್ವೆಲಿನ್ ಉಡುಗೊರೆ ಸ್ವೀಕರಿಸಿದ್ದಾರೆ ಎಂಬ ಆರೋಪ ಇದೆ. 2022ರ ಆಗಸ್ಟ್ 17 ರಂದು, ಜಾಕ್ವೆಲಿನ್ ವಿರುದ್ಧ ಇ.ಡಿ ಚಾರ್ಜ್ಶೀಟ್ ಸಲ್ಲಿಸಿದೆ. ಜಾಕ್ವೆಲಿನ್ ದುಬಾರಿ ಉಡುಗೊರೆ ಪಡೆದಿದ್ದಾರೆ ಎನ್ನಲಾಗಿದೆ. ಈ ಉಡುಗೊರೆಗಳ ಮೌಲ್ಯ ₹ 71 ಲಕ್ಷ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.