ಅಮರಾವತಿ: ಮಾಜಿ ಸಿಎಂ, ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರಿಗೆ ಹಿಂದೂ ಸಂಪ್ರದಾಯಗಳು, ಆಚರಣೆಗಳು ಮತ್ತು ಪದ್ಧತಿಗಳ ಬಗ್ಗೆ ಅರಿವಿಲ್ಲ ಎಂದು ಬಿಜೆಪಿ ನಾಯಕ ಎಲ್. ದಿನಕರ್ ದೂರಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಪ್ರಸಾದ ಲಾಡುಗಳಿಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ದಿನಕರ್, 'ಸಾರ್ವಜನಿಕರ ಹಣವನ್ನು ಲೂಟಿ ಮಾಡುವುದು, ಹಿಂದೂ ಸಂಪ್ರದಾಯಗಳು ಮತ್ತು ಆಚರಣೆಗಳಿಗೆ ಕಳಂಕ ತರುವುದನ್ನು ಬಿಟ್ಟರೆ ಸಮಾಜದಲ್ಲಿನ ವ್ಯವಸ್ಥೆಗಳ ಬಗ್ಗೆ ಜಗನ್ ಅವರಿಗೆ ಜ್ಞಾನವಿಲ್ಲ' ಎಂದು ಕಿಡಿಕಾರಿದ್ದಾರೆ.

ಈ ಆರೋಪಗಳ ಕುರಿತು ಪ್ರತಿಕ್ರಿಯಿಸಿದ್ದ ಜಗನ್, 'ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ವಿರುದ್ಧ ಅವರು ವಾಗ್ದಾಳಿ ನಡೆಸಿದ್ದರು. ನಾಯ್ಡು ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುತ್ತಿದ್ದಾರೆ. ತಮ್ಮ 100 ದಿನಗಳ ಆಡಳಿತ ಕುರಿತು ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ' ಎಂದು ಆರೋಪಿಸಿದ್ದರು.
.ಚಂದ್ರಬಾಬು ನಾಯ್ಡು ರಾಜಕೀಯ ಲಾಭಕ್ಕೆ ದೇವರನ್ನು ಬಳಸಿಕೊಳ್ಳುತ್ತಿದ್ದಾರೆ: ಜಗನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.