ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ವಿಸರ್ಜಿಸಿದ್ದಾರೆ.

ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಪಕ್ಷದ ನೂತನ ಪದಾಧಿಕಾರಿಗಳು ಹಾಗೂ ವಿವಿಧ ವಿಭಾಗಗಳನ್ನು ರಚಿಸಲಾಗುವುದು ಎಂದು ಪಕ್ಷ ತಿಳಿಸಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿರುವ ಪಿಡಿಪಿ, ಕೇವಲ ಮೂರು ಸ್ಥಾನಗಳನ್ನಷ್ಟೇ ಗೆದ್ದಿದೆ.

ಮಾಜಿ ಮುಖ್ಯಮಂತ್ರಿಯೂ ಆಗಿರುವ ಮುಫ್ತಿ ಅವರಿಗೆ ಈ ಫಲಿತಾಂಶವು ಮುಜುಗರವನ್ನುಂಟು ಮಾಡಿದೆ. ಅವರು ಫಲಿತಾಂಶದ ಬೆನ್ನಲ್ಲೇ, ಹಿರಿಯ ನಾಯಕರು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳೊಂದಿಗೆ ಪುನರವಲೋಕನ ಸಭೆ ನಡೆಸಿದ್ದರು.

ಚುನಾವಣೆಯಲ್ಲಿ ಅತಿಹೆಚ್ಚು (42) ಸ್ಥಾನ ಗೆದ್ದಿದ್ದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಒಮರ್ ಅಬ್ದುಲ್ಲಾ ಅವರು ಇಂಡಿಯಾ ಮೈತ್ರಿಕೂಟದ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ.
.ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ.ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಒಮರ್ ಜತೆಗೂಡಿ ಕೆಲಸ: ಪ್ರಧಾನಿ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.