ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರ ವಿಧಾನಸಭೆಗೆ ನಡೆಯಲಿರುವ ಮೊದಲ ಹಂತದ ಮತದಾನದಲ್ಲಿ ಒಟ್ಟು 219 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳ 24 ವಿಧಾನಸಭೆ ಕ್ಷೇತ್ರಗಳಿಗೆ ಸೆಪ್ಟೆಂಬರ್ 18ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಒಟ್ಟು 280 ನಾಮಪತ್ರಗಳು ಸಲ್ಲಿಕೆಯಾಗಿವೆ. ಪರಿಶೀಲನೆಯ ಬಳಿಕ 36 ನಾಮಪತ್ರಗಳು ತಿರಸ್ಕೃತಗೊಂಡಿವೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಶುಕ್ರವಾರ 25 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18ರಂದು ಮೊದಲ ಹಂತ, ಸೆ.25ರಂದು ಎರಡನೇ ಹಂತ ಮತ್ತು ಅಕ್ಟೋಬರ್ 01ರಂದು ಮೂರನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
.ಜಮ್ಮು–ಕಾಶ್ಮೀರ ವಿಧಾನಸಭೆ ಚುನಾವಣೆ: ಫಾರೂಕ್, ಮುಫ್ತಿ, ಆಜಾದ್ ಸ್ಪರ್ಧೆ ಇಲ್ಲ.ಜಮ್ಮು & ಕಾಶ್ಮೀರ ಚುನಾವಣೆ: ಬಿಜೆಪಿಗೆ ಬಂಡಾಯದ ಬಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.