ಶ್ರೀನಗರ: ಭಾರತೀಯ ಜನತಾ ಪಕ್ಷಕ್ಕೆ ಸೇರಿದ ಸರಪಂಚ್ (ಸ್ಥಳೀಯ ಪಂಚಾಯಿತಿ ಮುಖಂಡ) ಮೇಲೆ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಶ್ರೀನಗರದ ಖಾನ್ಮೋಹ್ನಲ್ಲಿ ಇತ್ತೀಚೆಗಷ್ಟೇ ಸರಪಂಚ್ ಒಬ್ಬರನ್ನು ಉಗ್ರಗಾಮಿಗಳು ಅವರ ಮನೆಯಲ್ಲಿ ಗುಂಡಿಟ್ಟು ಹತ್ಯೆ ಮಾಡಿದ್ದರು. ಈಗ ಕುಲ್ಗಾಮ್ನಲ್ಲೂ ಅಂಥದ್ದೇ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ತೀವ್ರ ಗಾಯಗೊಂಡಿದ್ದ ಸರಪಂಚ್ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಈ ವರ್ಷ ಪಂಚಾಯಿತಿ ಸದಸ್ಯರ ಮೇಲೆ ನಡೆದಿರುವ ಮೂರನೇ ದಾಳಿ ಇದಾಗಿದೆ. ಪಂಚಾಯಿತಿ ಸದಸ್ಯರನ್ನು ರಕ್ಷಿಸುವಲ್ಲಿ ಜಮ್ಮು ಮತ್ತು ಕಾಶ್ಮೀರ ಆಡಳಿತವು ಸೂಕ್ತ ಕ್ರಮಕೈಗೊಂಡಿಲ್ಲ ಎಂದು ಪ್ರಮುಖ ರಾಜಕೀಯ ಪಕ್ಷಗಳು ಆರೋಪಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.