ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನೆರವೇರಿದೆ. ಇತಿಹಾಸಲ್ಲಿ ಈ ದಿನ (ಜನವರಿ 22) ದೈವತ್ವ ಮೆರೆಯುವ ಕ್ಷಣವಾಗಿರುತ್ತದೆ ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಬಣ್ಣಿಸಿದ್ದಾರೆ.

‘ರಾಷ್ಟ್ರೀಯ ಹೆಮ್ಮೆಯ ಪುನರುಜ್ಜೀವನವನ್ನು ಗುರುತಿಸುವ ಸಂಭ್ರಮಾಚರಣೆಯ ಕ್ಷಣವನ್ನು ವೀಕ್ಷಿಸಲು ಸಂತೋಷವಾಗಿದೆ. ಈ ದಿನವನ್ನು (ಜನವರಿ 22) ನಮ್ಮ ನಾಗರಿಕತೆಯ ಪಥದಲ್ಲಿ ‘ದೈವತ್ವವನ್ನು ಮೆರೆಯುವ ಕ್ಷಣ’ ಕ್ಷಣವೆಂದು ಇತಿಹಾಸದ ಪುಟದಲ್ಲಿ ದಾಖಲಾಗುತ್ತದೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಈ ಪವಿತ್ರ ದಿನದಂದು ಶ್ರೀರಾಮನ ಪ್ರಾಮಾಣಿಕತೆ, ನಮ್ರತೆ, ಕಾಳಜಿ ಮತ್ತು ಸಹಾನುಭೂತಿಯ ಮೌಲ್ಯಗಳನ್ನು ಜೀವನದ ಮಾರ್ಗವಾಗಿ ಜ್ಞಾನೋದಯ, ಶಾಂತಿ, ಸಾಮರಸ್ಯ ಮತ್ತು ಸದಾಚಾರವನ್ನು ಪಸರಿಸಲು ಸಂಕಲ್ಪ ಮಾಡೋಣ’ ಎಂದು ಧನಕರ್ ಬರೆದುಕೊಂಡಿದ್ದಾರೆ.

ಅಯೋಧ್ಯೆಯಲ್ಲಿ ಅರ್ಚಕರು, ಪಂಡಿತರು, ಸಂತರ ಸಮ್ಮುಖದಲ್ಲಿ ಬಾಲರಾಮನ ಪಟ್ಟಾಭಿಷೇಕದ ವಿಧಿವಿಧಾನಗಳನ್ನು ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ವಿಧಿವಿಧಾನಗಳನ್ನು ನೆರವೇರಿಸಿದ ಪ್ರಧಾನಿ ಮೋದಿ ಅವರು ರಾಮನ ಪಾದಗಳಿಗೆ ಪುಷ್ಪ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಆರ್‌ಎಸ್‌ಎಸ್ ಮುಖಂಡ ಮೋಹನ್ ಭಾಗವತ್ ಅವರೊಂದಿಗೆ ಸೇರಿ ಆರತಿ ಬೆಳಗಿದರು. ಈ ವೇಳೆ ದೇವಾಲಯದ ಒಳಗೆ ನೆರೆದವರ ಶ್ರೀರಾಮ ಜಯರಾಮ ಎಂಬ ರಾಮನಾಮ ಮುಗಿಲುಮುಟ್ಟಿತ್ತು. ಮಂತ್ರಘೋಷಗಳು ಮೊಳಗಿದ್ದವು, ವಾದ್ಯಗಳ ನಾದ ದೇವಾಲಯವನ್ನು ಆವರಿಸಿತ್ತು.

ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಗುಜರಾತ್ ಮಾಜಿ ಸಿಎಂ ಆನಂದಿ ಬೇನ್ ಪಟೇಲ್, ಇಬ್ಬರು ಪ್ರಧಾನ ಅರ್ಚಕರು ಗರ್ಭಗುಡಿಯಲ್ಲಿದ್ದರು.

ಮೋದಿಯವರ ಸಮ್ಮುಖದಲ್ಲಿ ಬಾಲರಾಮನ ವಿಗ್ರಹವನ್ನು ಅನಾವರಣಗೊಳಿಸುತ್ತಿದ್ದಂತೆ ಭಾರತೀಯ ವಾಯುಪಡೆ (ಐಎಎಫ್) ಹೆಲಿಕಾಪ್ಟರ್‌ಗಳು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಾಲಯದ ಮೇಲೆ ಹೂವಿನ ಮಳೆಗೈದವು.

ಕನ್ನಡಿಗ ಅರುಣ್ ಯೋಗಿರಾಜ್ ಕೆತ್ತಿದ ಬಾಲರಾಮನ ಮೂರ್ತಿ ಇಂದು ಅಯೋಧ್ಯೆಯಲ್ಲಿ ಸ್ಥಾಪನೆಗೊಂಡಿದೆ.
.Live: ಕೊನೆಗೂ ನಮ್ಮ ರಾಮ ಬಂದಿದ್ದಾನೆ– ಪ್ರಧಾನಿ ನರೇಂದ್ರ ಮೋದಿ.ಅಯೋಧ್ಯೆಯಲ್ಲಿ ನೆಲೆಸಿದ ಬಾಲರಾಮ; ಎಂಟು ಸಾವಿರ ಅತಿಥಿಗಳು ಸಾಕ್ಷಿ.ಕರ್ನಾಟಕಕ್ಕೆ ಸಿಕ್ಕ ನಿಜವಾದ ಸಮ್ಮಾನ: ಶ್ರೀರಾಮ, ಮೋದಿಯನ್ನು ಕೊಂಡಾಡಿದ ನಟ ಸುದೀಪ್.ಬಾಲರಾಮನ ಪ್ರಾಣ ಪ್ರತಿಷ್ಠಾಪನೆ: ಅಯೋಧ್ಯೆಯಲ್ಲಿ ಮನೆ ಮಾಡಿದ ಸಂಭ್ರಮ.ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ: ಅಯೋಧ್ಯೆಯಲ್ಲಿ ಸಡಗರ.PHOTOS: ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ.ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ | ಅಮೆರಿಕದಲ್ಲಿ ಮೊಳಗಿದ ಜೈ ಶ್ರೀರಾಮ್ ಘೋಷಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.