ರಾಮಪುರ: 2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಎರಡು ಪ್ರಕರಣಗಳ ವಿಚಾರಣೆಗಾಗಿ ಮಾಜಿ ಸಂಸದೆ ಮತ್ತು ನಟಿ ಜಯಪ್ರದಾ ಅವರು ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದರು.

‘ಜಯಪ್ರದಾ ಅವರು ತಮ್ಮ ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದು, ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿದೆ’ ಎಂದು ಪ್ರಾಸಿಕ್ಯೂಷನ್ ಅಧಿಕಾರಿ ನೀರಜ್ ಕುಮಾರ್ ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಅಭ್ಯರ್ಥಿಯಾಗಿದ್ದ ಜಯಪ್ರದಾ ಅವರು ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ ಎಂದು ಕೆಮ್ರಿ ಮತ್ತು ಸ್ವರ್ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.

ಪ್ರಕರಣ ಸಂಬಂಧ ನ್ಯಾಯಾಲಯವು ಜಯಪ್ರದಾ ಅವರಿಗೆ ಹಲವಾರು ಸಮನ್ಸ್‌ಗಳನ್ನು ಮತ್ತು 7 ಜಾಮೀನು ರಹಿತ ವಾರಂಟ್‌ಗಳನ್ನು ನೀಡಿತ್ತು. ಆದರೂ ವಿಚಾರಣೆಗೆ ಹಾಜರಾಗದೇ ಇದ್ದ ಜಯಪ್ರದಾ ಅವರನ್ನು ಬಂಧಿಸಿ ಮಾರ್ಚ್ 6ರೊಳಗಾಗಿ ಕೋರ್ಟ್ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯವು ಫೆಬ್ರವರಿ 27ರಂದು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿತ್ತು.

ಮಾರ್ಚ್ 4ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.