ರಾಂಚಿ: ಜಾರ್ಖಂಡ್‌ನಲ್ಲಿ ಅಬಕಾರಿ ಇಲಾಖೆಯ ಕಾನ್‌ಸ್ಟೆಬಲ್ ನೇಮಕಾತಿಯ ದೈಹಿಕ ಪರೀಕ್ಷೆ ವೇಳೆ ಮೂರ್ಛೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದ 25 ಅಭ್ಯರ್ಥಿಗಳ ಪೈಕಿ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಲಮು ಜಿಲ್ಲೆಯ ಮೇದಿನಿನಗರದಲ್ಲಿರುವ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಅಭ್ಯರ್ಥಿಗಳು ಮೃತಪಟ್ಟಿದ್ದರೆ, ಮತ್ತೊಬ್ಬ ಅಭ್ಯರ್ಥಿ ರಾಂಚಿಯ ‘ರಿಮ್ಸ್’ನಲ್ಲಿ ಸಾವಿಗೀಡಾಗಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಮಣಿಭೂಷಣ್ ಪ್ರಸಾದ್ ತಿಳಿಸಿದ್ದಾರೆ.

ಮೃತರನ್ನು ಅಮರೇಶ್ ಕುಮಾರ್ (20), ಅರುಣ್ ಕುಮಾರ್ (25) ಮತ್ತು ಪ್ರದೀಪ್ ಕುಮಾರ್ (25) ಎಂದು ಗುರುತಿಸಲಾಗಿದೆ.

ಪಲಾಮು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಕಾನ್‌ಸ್ಟೆಬಲ್ ನೇಮಕಾತಿಯ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಿದ್ದ 100ಕ್ಕೂ ಅಭ್ಯರ್ಥಿಗಳು ಮೂರ್ಛೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆ.9ರವರೆಗೆ ನೇಮಕಾತಿ ಪ್ರಕ್ರಿಯೆ ಮುಂದುವರಿಯಲಿದೆ. ಆದರೆ, ದೈಹಿಕ ಪರೀಕ್ಷೆಯನ್ನು 9 ಗಂಟೆ ಬದಲು ಬೆಳಿಗ್ಗೆ 4.30ರಿಂದ ನಡೆಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಕಾನ್‌ಸ್ಟೆಬಲ್ ಅಭ್ಯರ್ಥಿಗಳು ಮೃತಪಟ್ಟಿರುವ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.