ಧನ್ಬಾದ್: ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಸಂಘರ್ಷದಲ್ಲಿ ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದರು.

ಪಾಂಡರ್ಪಾಲಾ ಪ್ರದೇಶದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಹೇಳಿದರು.

‘ಮೊಹರಂ ಮೆರವಣಿಗೆಯ ಮಾರ್ಗವನ್ನು ಬದಲಾಯಿಸಿದ್ದರಿಂದ ಸಂಘರ್ಷ ನಡೆದಿದೆ. ಮಾಹಿತಿ ಲಭ್ಯವಾದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಖಾರಿ ಎಚ್.ಪಿ.ಜನಾರ್ದನ್ ತಿಳಿಸಿದರು.

ತೀವ್ರ ಮಳೆಯಾದ ಕಾರಣ ಮಾರ್ಗ ಬದಲಿಸಬೇಕಾಯಿತು ಎಂದು ಆಯೋಜಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.