ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಒಟ್ಟು 81 ವಿಧಾನಸಭಾ ಕ್ಷೇತ್ರಗಳಿರುವ ರಾಜ್ಯದಲ್ಲಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಉಳಿದ 38 ಕ್ಷೇತ್ರಗಳಿಗೆ ನ.20ರಂದು ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ ಮಾಜಿ ಮುಖ್ಯಮಂತ್ರಿ ಚಂಪೈ ಸೇರಿ 683 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

15 ಜಿಲ್ಲೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5ಕ್ಕೆ ಮುಕ್ತಾಯವಾಗಲಿದೆ.

950 ಬೂತ್ಗಳಲ್ಲಿ ಮತದಾನವು ಸಂಜೆ 4 ಗಂಟೆಗೆ ಕೊನೆಗೊಳ್ಳಲಿದೆ, ಆದರೂ ಆ ಸಮಯದಲ್ಲಿ ಸರದಿಯಲ್ಲಿ ನಿಂತಿರುವ ಜನರು ತಮ್ಮ ಹಕ್ಕು ಚಲಾಯಿಸಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 1.37 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ.

683 ಅಭ್ಯರ್ಥಿಗಳಲ್ಲಿ 69 ಪುರುಷರು, 73 ಮಹಿಳೆಯರು ಮತ್ತು ಒಬ್ಬ ಲೈಂಗಿಕ ಅಲ್ಪಸಂಖ್ಯಾತರಿದ್ದಾರೆ. 43 ಕ್ಷೇತ್ರಗಳಲ್ಲಿ 17 ಸಾಮಾನ್ಯ, 20 ಬುಡಕಟ್ಟು ಹಾಗೂ 6 ಪರಿಶಿಷ್ಟ ಜಾತಿಗೆ ಮೀಸಲಿಡಲಾಗಿದೆ.

ಜಾರ್ಖಂಡ್ನಲ್ಲಿ ಜೆಎಂಎಂ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟವು ಮರಳಿ ಅಧಿಕಾರಕ್ಕೆ ಬರುವ ಯತ್ನದಲ್ಲಿದ್ದರೆ, ಬಿಜೆಪಿಯು ‘ಇಂಡಿಯಾ’ಕ್ಕೆ ತೀವ್ರ ಸ್ಪರ್ಧೆ ಒಡ್ಡಿದೆ.

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಭಾಗಿಯಾಗಿ ಮತದಾನದ ಹಕ್ಕು ಚಲಾಯಿಸಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಕರೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.