ರಾಂಚಿ: ಜಾರ್ಖಂಡ್ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.

ಬಿಜೆಪಿಯವರು ಶಾಸಕರನ್ನು ಖರೀದಿಸಬಹುದು ಎಂಬ ಆತಂಕದಿಂದ ಫೆಬ್ರುವರಿ 2ರಂದು ಹೈದರಾಬಾದ್ಗೆ ತೆರಳಿದ್ದ ಜೆಎಂಎಂ ನೇತೃತ್ವದ ಮೈತ್ರಿಕೂಟದ 40 ಶಾಸಕರು, ವಿಶ್ವಾಸಮತ ಯಾಚನೆ ಕಾರಣ ಭಾನುವಾರ ರಾಂಚಿಗೆ ಬಂದಿಳಿದರು.

ಅವರನ್ನು ಇಲ್ಲಿನ ವಿಮಾನ ನಿಲ್ದಾಣದಿಂದ ಸರ್ಕಾರಿ ಅತಿಥಿ ಗೃಹಕ್ಕೆ ಕರೆದೊಯ್ಯಲಾಯಿತು. ಮೂರು ದಿನಗಳಿಂದ ಹೈದರಾಬಾದ್ನ ಹೊರವಲಯದ ಐಷಾರಾಮಿ ರೆಸಾರ್ಟ್ನಲ್ಲಿ ಈ ಶಾಸಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

ಹೇಮಂತ್ ಸೊರೇನ್ ಅವರು ತಮ್ಮ ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ಹುದ್ದೆಗೆ ಜನವರಿ 31ರಂದು ರಾಜೀನಾಮೆ ನೀಡಿದ್ದರು. ಫೆಬ್ರುವರಿ 2ರಂದು ಚಂಪೈ ಸೊರೇನ್ ಅವರು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಅಂದು ನಡೆಸಿದ ಮೊದಲ ಸಂಪುಟ ಸಭೆಯಲ್ಲಿ ಇದೇ 5ರಂದು ವಿಶ್ವಾಸಮತ ಯಾಚಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು.

ಉನ್ನತ ಮಟ್ಟದ ಸಭೆ: ಮುಖ್ಯಮಂತ್ರಿ ಅವರು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಭಾನುವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಹಾಗೂ ಇತರ ಅಧಿಕಾರಿಗಳು ಇದ್ದರು.

‘ಜಾರ್ಖಂಡ್ ಅನ್ನು ಅಪರಾಧ ಮುಕ್ತಗೊಳಿಸುವುದು ನಮ್ಮ ಸರ್ಕಾರದ ಆದ್ಯತೆ. ಅಪರಾಧ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಿ’ ಎಂದು ಚಂಪೈ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.