ರಾಂಚಿ: ಕಲ್ಲಿದ್ದಲು ಕಂಪನಿಗಳು ಬಾಕಿ ಉಳಿಸಿಕೊಂಡಿರುವ ₹1.36 ಲಕ್ಷ ಕೋಟಿಯನ್ನು ಪಾವತಿಸುವಂತೆ ಆಗ್ರಹಿಸಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪ್ರಧಾನಿ ಮೋದಿಗೆ ಮಂಗಳವಾರ ಬಹಿರಂಗ ಪತ್ರ ಬರೆದಿದ್ದಾರೆ.

ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ಘೋಷಣೆ ಆಗುವುದಕ್ಕೂ ಮುನ್ನವೇ ಪತ್ರ ಬರೆದಿರುವ ಮುಖ್ಯಮಂತ್ರಿ, ‘ಇದು ರಾಜ್ಯದ ಅಭಿವೃದ್ಧಿಗೆ ಸರಿಪಡಿಸಲಾಗದ ಹಾನಿಯನ್ನುಂಟು ಮಾಡುತ್ತಿದೆ. ನಾನು ವಿಶೇಷ ಬಜೆಟ್ ಕೇಳುತ್ತಿಲ್ಲ. ಆದರೆ, ರಾಜ್ಯಕ್ಕೆ ಬರಬೇಕಾದ ಬಾಕಿ ಹಣವನ್ನು ನೀಡುವಂತೆ ಕೋರುತ್ತಿರುವೆ’ ಎಂದಿದ್ದಾರೆ.

‘ಬಾಕಿ ಮೊತ್ತವು ನಮ್ಮ ಹಕ್ಕು. ಅದನ್ನು ಕೇಳುತ್ತಿದ್ದೇವೆ’ ಎಂದು ಸೊರೇನ್ ಪ್ರಧಾನಿಗೆ ಬರೆದಿರುವ ಮುಕ್ತ ಪತ್ರವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.

‘ಸುಪ್ರೀಂ ಕೋರ್ಟ್ನ ಸೂಚನೆ ಬಳಿಕವೂ ಕಲ್ಲಿದ್ದಲು ಕಂಪನಿಗಳು ಬಾಕಿ ಹಣ ಪಾವತಿಸಿಲ್ಲ. ನಿಮ್ಮ ಕಚೇರಿ, ಹಣಕಾಸು ಸಚಿವಾಲಯ, ನೀತಿ ಆಯೋಗವೂ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಈ ಕುರಿತಂತೆ ಪ್ರಶ್ನಿಸಲಾಗಿದೆ. ಆದರೆ ಇಲ್ಲಿಯವರೆಗೂ ಹಣ ಪಾವತಿಯಾಗಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.