ರಾಂಚಿ: ಬಹುಕೋಟಿ ಮೇವು ಹಗರಣ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ದೋಷಿಯಾಗಿರುವ ಆರ್ಜೆಡಿ ಪಕ್ಷದ ನಾಯಕ ಲಾಲುಪ್ರಸಾದ್ ಯಾದವ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಸೆಪ್ಟೆಂಬರ್ 11ಕ್ಕೆ ಮುಂದೂಡಿದೆ.

ಸಿಬಿಐ ಪರ ವಕೀಲರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ವಿಚಾರಣೆ ಮುಂದಕ್ಕೆ ಹಾಕಲಾಗಿದೆ.

1992–93ರಲ್ಲಿ ಚಾಯಿಬಾಸಾ ಖಜಾನೆಯಿಂದ ₹33.67 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ಅಧ್ಯಕ್ಷ ಲಾಲು ಸೇರಿದಂತೆ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.ಆ ಅವಧಿಯಲ್ಲಿ ಲಾಲು ಅವರೇ ಬಿಹಾರದ ಮುಖ್ಯಮುಂತ್ರಿ ಆಗಿದ್ದರು.

‘ಲಾಲು ಅವರು ಈಗಾಗಲೇ ತಮಗೆ ವಿಧಿಸಿರುವ ಶಿಕ್ಷೆಯ ಪ್ರಮಾಣದ ಅರ್ಧದಷ್ಟು ಅವಧಿಯನ್ನು ಜೈಲಿನಲ್ಲಿ ಕಳೆದಿದ್ದಾರೆ. ಅವರ ಆರೋಗ್ಯ ಸರಿಯಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ಜಾಮೀನು ಮಂಜೂರು ಮಾಡಲಿದೆ’ ಎಂದು ಲಾಲು ಪ್ರಸಾದ್ ಪರ ವಕೀಲ ದೇವರ್ಷಿ ಮಂಡಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

72 ವರ್ಷ ವಯಸ್ಸಿನಲಾಲು ಅವರು ರಾಂಚಿಯಲ್ಲಿರುವ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ರಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.