ದುಮ್ಕಾ: ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಮಹಿಳೆ ಹಾಗೂ ಪುರುಷನನ್ನು ಗ್ರಾಮಸ್ಥರು ಬೆತ್ತಲೆ ಮೆರವಣಿಗೆ ಮಾಡಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

ಈ ಇಬ್ಬರೂ ವಿವಾಹವಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದರು ಎಂದು ಕೃತ್ಯದಲ್ಲಿ ಭಾಗಿಯಾಗಿದ್ದವರು ಆರೋಪಿಸಿದ್ದಾರೆ.

‘ಮುಫ್ಪಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಯೂರ್ನಾಚ್ ಎಂಬ ಹಳ್ಳಿಯಲ್ಲಿ ಮಧ್ಯವಯಸ್ಕ ಒಬ್ಬ ಮಹಿಳೆ ಹಾಗೂ ಪುರುಷನನ್ನು ಥಳಿಸಿ, ಗ್ರಾಮದಲ್ಲಿ ಬೆತ್ತಲೆ ಮೆರವಣಿಗೆ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ‘ ಎಂದು ದುಮ್ಕಾ ಜಿಲ್ಲೆಯ ಎಸ್ಪಿ ಅಂಬರ್ ಲಾಕ್ರಾ ತಿಳಿಸಿದ್ದಾರೆ.

‘ಸಂತ್ರಸ್ತ ಪುರುಷ ಹಾಗೂ ಮಹಿಳೆ ಅಕ್ಕಪಕ್ಕದ ಗ್ರಾಮದವರು. ಇಬ್ಬರೂ ದಿನಗೂಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಬೇರೆ ಮದುವೆಯಾಗಿತ್ತು. ಅದಾಗ್ಯೂ ಇಬ್ಬರೂ ಪರಸ್ಪರ ಸಂಬಂಧ ಹೊಂದಿದ್ದರು ಎಂದು ಗ್ರಾಮದ ಕೆಲವರು ಅನಾಗರಿಕವಾಗಿ ನಡೆದುಕೊಂಡಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ‘ ಎಂದು ಎಸ್ಪಿ ತಿಳಿಸಿದ್ದಾರೆ.

ಇದೇ ಜಿಲ್ಲೆಯಲ್ಲಿ ಕಳೆದ ಆಗಸ್ಟ್ನಲ್ಲಿ ಯುವತಿಯೊಬ್ಬಳು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಳೆಂದು ಆರೋಪಿಸಿ ಕೆಲ ಯುವಕರು ಆಕೆಯ ಕೊರಳಿಗೆ ಚಪ್ಪಲಿಗಳನ್ನು ಹಾಕಿ ಬೆತ್ತಲೆ ಮೆರವಣಿಗೆ ಮಾಡಿದ್ದರು ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ:ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆಯೇ ಕಾಯಂ: ಹೈಕೋರ್ಟ್ ಆದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.