ಗುವಾಹಟಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದೃಷ್ಟಿಯಿಂದ ಜಾರ್ಖಂಡ್ ಕಠಿಣ ರಾಜ್ಯವಾಗಿದೆ. ಆದರೆ, ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭರವಸೆಯನ್ನು ಪಕ್ಷ ಹೊಂದಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮುಂಬರುವ ವಿಧಾನಸಭೆ ಚುನಾವಣೆಗಾಗಿ ನಾನು ಜಾರ್ಖಂಡ್ನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ನವೆಂಬರ್ 13ರಂದು ಅಸ್ಸಾಂನಲ್ಲಿ ನಡೆಯಲಿರುವ ಉಪಚುನಾವಣೆಗಳ ಕಡೆಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ’ ಎಂದು ಅವರು ತಿಳಿಸಿದ್ದಾರೆ.

‘ಬಿಜೆಪಿ ದೃಷ್ಟಿಯಿಂದ ಜಾರ್ಖಂಡ್ ಕಠಿಣ ರಾಜ್ಯವಾಗಿದೆ. ಆದರೆ, ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಸಿಗುವ ಭರವಸೆಯಿದೆ’ ಎಂದು ಅವರು ಹೇಳಿದ್ದಾರೆ.

ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ.

ಗುರುವಾರ ಜಾರ್ಖಂಡ್ನಲ್ಲಿ ನಡೆಸಿದ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 1.5 ಲಕ್ಷ ಉದ್ಯೋಗ ಸೃಜಿಸುವುದಾಗಿ ಶರ್ಮಾ ಭರವಸೆ ನೀಡಿದ್ದರು.
.ಜಾರ್ಖಂಡ್ ಚುನಾವಣೆ | BJP ಅಧಿಕಾರಕ್ಕೆ ಬಂದರೆ 1.5 ಲಕ್ಷ ಉದ್ಯೋಗ: ಅಸ್ಸಾಂ CM.ಜಾರ್ಖಂಡ್ ವಿಧಾನಸಭೆ ಚುನಾವಣೆ: 7 ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.