ನವದೆಹಲಿ: ವಿದ್ಯಾರ್ಥಿನಿಯೊಬ್ಬರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ(ಜೆಎನ್‌ಯು) ಹಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಮಾಜ ವಿಜ್ಞಾನ, ಭೌತ ವಿಜ್ಞಾನ, ಸ್ಕೂಲ್ ಆಫ್ ಇಂಟರ್‌ನ್ಯಾಷನಲ್, ಸ್ಕೂಲ್ ಆಫ್ ಲಾಂಗ್ವೇಜ್, ಸೌಂದರ್ಯ ಶಾಸ್ತ್ರ ಮತ್ತು ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದಾರೆ.

ಜೆಎನ್‌ಯು ರಿಂಗ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದಾಗ ನಾಲ್ವರು ನನ್ನ ವಿರುದ್ಧ ಲೈಂಗಿಕತೆಗೆ ಸಂಬಂಧಿಸಿದ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಅಲ್ಲಿನ ಆಡಳಿತ ಮಂಡಳಿಗೆ ದೂರು ನೀಡಿದ್ದರು.

ಸಂತ್ರಸ್ಥೆಯ ಸುರಕ್ಷತೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಂಘಟನೆಯು ಆಡಳಿತ ಮಂಡಳಿಯನ್ನು ಒತ್ತಾಯಿಸಿದೆ.

'ವಿಶ್ವವಿದ್ಯಾಲಯದ ಉಪಕುಲಪತಿಗಳು ನಮ್ಮ ಬೇಡಿಕೆಗೆ ಸ್ಪಂದಿಸದ ಕಾರಣ ಏಪ್ರಿಲ್ 16ರಂದು ತರಗತಿ ಬಹಿಷ್ಕರಿಸಿ ಸಂಪೂರ್ಣ ವಿಶ್ವವಿದ್ಯಾಲಯದ ನಡೆಸಲಾಗುವುದು’ಎಂದು ಶನಿವಾರವೇ ಜೆಎನ್‌ಯುಎಸ್‌ಯು ತಿಳಿಸಿತ್ತು.

ಸದ್ಯ ರದ್ದು ಮಾಡಲಾಗಿರುವ ಲೈಂಗಿಕ ಕಿರುಕುಳದ ವಿರುದ್ಧ ಲಿಂಗ ಸಂವೇದನೆ ಸಮಿತಿ ಪುನರ್ ಸ್ಥಾಪನೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ನಿರ್ಧಾರ ಕೈಗೊಳ್ಳುವ ಎಲ್ಲ ಸಮಿತಿಗಳಲ್ಲಿ ಜೆಎನ್‌ಯುಎಸ್‌ಯು ಸೇರ್ಪಡೆಯ ಬೇಡಿಕೆಯನ್ನೂ ವಿದ್ಯಾರ್ಥಿ ಸಂಘಟನೆ ಮುಂದಿಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.