ಅರಾರಿಯಾ/ ಪಟ್ನಾ: ಅಪರಿಚಿತರು ಗುಂಡಿನ ದಾಳಿ ನಡೆಸಿ ಅರಾರಿಯಾ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಲ್ ಕುಮಾರ್ ಯಾದವ್ (35) ಹತ್ಯೆಯಾದ ಪತ್ರಕರ್ತ. ಹಿಂದಿ ಪತ್ರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರನ್ನು ಪ್ರೇಮನಗರ ಗ್ರಾಮದ ಅವರ ಮನೆಯಲ್ಲಿ ಹತ್ಯೆಮಾಡಿದ್ದಾರೆ.

ಅಪರಿಚಿತರು ಬೆಳಿಗ್ಗೆ 5.30ರ ಹೊತ್ತಿಗೆ ಯಾದವ್ ಅವರ ಮನೆಯ ಬಾಗಿಲು ತಟ್ಟಿದ್ದು, ಅವರು ಬಾಗಿಲು ತೆಗೆದು ತಕ್ಷಣ ಗುಂಡು ಹಾರಿಸಿದ್ದಾರೆ. ಯಾದವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ದೊರೆತ ತಕ್ಷಣ ಸ್ಥಳಕ್ಕಾಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಶ್ವಾನ ದಳ ಮತ್ತು ವಿಧಿವಿಜ್ಞಾನ ತಂಡಗಳು ತನಿಖೆ ನಡೆಸುತ್ತಿವೆ ಎಂದು ಅರಾರಿಯಾ ಪ್ರದೇಶದ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ನಿತೀಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಘಟನೆ ಸಂಬಂಧ ‘ಬಿಹಾರದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ‘ ಎಂದು ವಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.