ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ: ಕಿರಿಯ ವೈದ್ಯರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ

Published : 6 ಅಕ್ಟೋಬರ್ 2024, 6:32 IST
Last Updated : 6 ಅಕ್ಟೋಬರ್ 2024, 6:32 IST
ಫಾಲೋ ಮಾಡಿ
Comments

ಕೋಲ್ಕತ್ತ: ಇಲ್ಲಿನ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು ಮತ್ತು ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯ ಬೇಡಿಕೆಯನ್ನಿಟ್ಟು ಧರಣಿ ನಿರತ ಕಿರಿಯ ವೈದ್ಯರು ಇಂದು (ಭಾನುವಾರ) ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.

ನಗರದ ಧರ್ಮತಾಳ ಪ್ರದೇಶದಲ್ಲಿ ಧರಣಿ ನಿರತ ಕಿರಿಯ ವೈದ್ಯರಿಗೆ ಹಿರಿಯ ವೈದ್ಯರೂ ಬೆಂಬಲ ಸೂಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

'ನಮ್ಮ ಸಹೋದರಿಯ ಭೀಕರ ಹತ್ಯೆಯ ವಿರುದ್ದ ಪ್ರತಿಭಟನೆಯನ್ನು ಮುಂದುವರಿಸಲು ನಿಮ್ಮೆಲ್ಲರ ಬೆಂಬಲವು ಹೆಚ್ಚಿನ ಧೈರ್ಯವನ್ನು ತುಂಬಲಿದೆ. ಇನ್ನೂ ನ್ಯಾಯ ದೊರಕಿಲ್ಲ. ವೈದ್ಯರ ಮೇಲೆ ಹಲ್ಲೆಗಳು ನಡೆಯುತ್ತಲೇ ಇವೆ. ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ' ಎಂದು ಪ್ರತಿಭಟನಾನಿರತ ವೈದ್ಯ ದೇಬಾಶಿಶ್ ಹಲ್ದರ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ 24 ತಾಸಿನ ಗಡುವು ನೀಡಲಾಗಿತ್ತು. ಆದರೆ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕದ ಕಾರಣ ಕಿರಿಯ ವೈದ್ಯರು ಶನಿವಾರ ರಾತ್ರಿ 8.30ರ ಸುಮಾರಿಗೆ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಕೋಲ್ಕತ್ತ ಪೊಲೀಸ್ ಹಲ್ಲೆ ನಡೆಸಿರುವ ಆರೋಪದಲ್ಲಿ ಶುಕ್ರವಾರ ಧರ್ಮತಾಳ ಪ್ರದೇಶದ ಡೋರಿನಾ ಕ್ರಾಸಿಂಗ್‌ನಲ್ಲಿ ವೈದ್ಯರು ಧರಣಿ ನಿರತರಾಗಿದ್ದರು.

ಮುಷ್ಕರ ಹಮ್ಮಿಕೊಂಡಿರುವ ವೇದಿಕೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಆಳವಡಿಸಲಾಗಿದೆ. ಕಿರಿಯ ವೈದ್ಯರಿಗೆ ಏನೇ ಸಂಭವಿಸಿದರೂ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ವೈದ್ಯರು ಹೇಳಿದ್ದಾರೆ.

ಶನಿವಾರ ರಾತ್ರಿಯಿಂದಲೇ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ.

ಈ ಹಿಂದೆ ಆಗಸ್ಟ್ 9ರಿಂದ ಪ್ರತಿಭಟನೆ ನಡೆಸಿದ್ದ ಕಿರಿಯ ವೈದ್ಯರು, ಸರ್ಕಾರದ ಆಶ್ವಾಸನೆ ಮೇರೆಗೆ 42 ದಿನಗಳ ಬಳಿಕ ಸೆಪ್ಟೆಂಬರ್ 21ರಂದು ಪ್ರತಿಭಟನೆ ಹಿಂಪಡೆದು ಕೆಲಸಕ್ಕೆ ಹಾಜರಾಗಿದ್ದರು.

ಕಿರಿಯ ವೈದ್ಯರ ಪ್ರತಿಭಟನೆ

ಕಿರಿಯ ವೈದ್ಯರ ಪ್ರತಿಭಟನೆ

(ಪಿಟಿಐ ಚಿತ್ರ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT