ಕೊಚ್ಚಿ: ಮಂಜೇಶ್ವರ ವಿಧಾನಸಭಾ ಚುನಾವಣೆಯಲ್ಲಿ ಅವ್ಯವಹಾರ ನಡೆದ ಕಾರಣ ಪಿ.ಬಿ. ಅಬ್ದುಲ್ ರಜಾಕ್ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದ್ದಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್, ಆ ಅರ್ಜಿಯನ್ನು ವಾಪಸ್ ಪಡೆಯಲು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಹಿಂಪಡೆಯುವ ನಿರ್ಧಾರಕ್ಕೆ ಹೈಕೋರ್ಟ್ ಸಮ್ಮತಿಸಿದ್ದು, ಈ ಪ್ರಕರಣಕ್ಕಾಗಿ ನ್ಯಾಯಾಲಯದ ಖರ್ಚು ₹42,000 ಪಾವತಿ ಮಾಡಬೇಕೆಂದು ಆದೇಶಿಸಿದೆ.

ಸುರೇಂದ್ರನ್ ಈ ಅರ್ಜಿ ಹಿಂಪಡೆದಿದ್ದರಿಂದ ಕೇರಳದ ಪಾಲಾವಿಧಾನಸಭಾ ಕ್ಷೇತ್ರದೊಂದಿಗೆಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿಯೂ ಉಪಚುನಾವಣೆ ನಡೆಯಲಿದೆ.

ಮಂಜೇಶ್ವರ ಚುನಾವಣೆ ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ಮತ್ತು ಸಿಪಿಎಂ ಅಕ್ರಮ ಮತದಾನ ನಡೆಸಿದೆ ಎಂದು ಸುರೇಂದ್ರನ್ ಕೋರ್ಟ್ ಮೆಟ್ಟಿಲು ಹತ್ತಿದ್ದರು.

2016ರಲ್ಲಿ ನಡೆದ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಪಿ.ಬಿ.ಅಬ್ದುಲ್ ರಜಾಕ್ ಅವರ ವಿರುದ್ಧ ಸ್ಪರ್ಧಿಸಿದ್ದ ಸುರೇಂದ್ರನ್ 89 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಮತದಾನದಲ್ಲಿ ಅಕ್ರಮ ನಡೆದಿದೆ. ಲೀಗ್ ಮತ್ತು ಸಿಪಿಎಂ ಕಳ್ಳಮತಗಳನ್ನು ಚಲಾಯಿಸಿ ಯುಡಿಎಫ್ ಗೆಲ್ಲುವಂತೆ ಮಾಡಿದ್ದಾರೆ. ಹಾಗಾಗಿ ತನ್ನನ್ನು ವಿಜಯಿಯಾಗಿ ಘೋಷಿಸಬೇಕೆಂದು ಒತ್ತಾಯಿಸಿ ಸುರೇಂದ್ರನ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣ ನ್ಯಾಯಾಲಯದಲ್ಲಿರುವಾಗಲೇ ಅಬ್ದುಲ್ ರಜಾಕ್ ಮೃತರಾಗಿದ್ದರು. ಆದರೂ ಸುರೇಂದ್ರನ್ ಕೇಸ್ ವಾಪಸ್ ಪಡೆಯಲು ಮುಂದಾಗಿರಲಿಲ್ಲ.

ಇದನ್ನೂ ಓದಿ:ಪ್ರಕರಣದಿಂದ ಹಿಂದೆ ಸರಿದ ಸುರೇಂದ್ರನ್: ಮಂಜೇಶ್ವರದಲ್ಲಿ ನಡೆಯಲಿದೆಉಪ ಚುನಾವಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.