ತಿರುವನಂತಪುರ: ಕೇರಳದ ಎರ್ನಾಕುಲಂ ಜಿಲ್ಲೆಯ ಕ್ರಿಶ್ಚಿಯನ್ ಸಮಾವೇಶ ಕೇಂದ್ರದಲ್ಲಿ (ಕನ್ವೆನ್ಷನ್ ಸೆಂಟರ್) ಇಂದು (ಭಾನುವಾರ) ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಘಟನೆ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸರ್ವಪಕ್ಷ ಸಭೆ ಕರೆದಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸೆಕ್ರೆಟರಿಯೇಟ್ ಹಾಲ್‌ನಲ್ಲಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.

ಪಿಣರಾಯಿ ಜತೆ ಅಮಿತ್ ಶಾ ಚರ್ಚೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿದ್ದು, ಸ್ಫೋಟದ ಕುರಿತಂತೆ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಕೇಂದ್ರ ಗೃಹ ಸಚಿವರ ನಿರ್ದೇಶನದ ಮೇರೆಗೆ ಭಯೋತ್ಪಾದನಾ ನಿಗ್ರಹ ಪಡೆ, ರಾಷ್ಟ್ರೀಯ ಭದ್ರತಾ ಸಿಬ್ಬಂದಿ(ಎನ್‌ಎಸ್‌ಜಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡಗಳನ್ನು ಕೇರಳಕ್ಕೆ ಕಳುಹಿಸಲಾಗಿದೆ.
.ಸ್ಫೋಟ: ಕೇರಳ ಸಿಎಂ ಜೊತೆ ಅಮಿತ್ ಶಾ ಚರ್ಚೆ– ಎನ್‌ಎಸ್‌ಜಿ, ಎನ್‌ಐಎ ತಂಡಗಳು ದೌಡು .ಕೇರಳ ಕಳಮಶ್ಶೇರಿ ಸರಣಿ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.