ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯು ಶನಿವಾರ ರಾಷ್ಟ್ರ ರಾಜಧಾನಿ ದೆಹಲಿಯನ್ನು ಪ್ರವೇಶಿಸಲಿದ್ದು, ನಟ, ರಾಜಕಾರಣಿ ಕಮಲ್ ಹಾಸನ್, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರು ಮತ್ತು ಪಕ್ಷದ ಉನ್ನತ ನಾಯಕರು ಜೊತೆಗೂಡುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

'ಹಿರಿಯ ಕಾಂಗ್ರೆಸ್ ನಾಯಕರು ಮತ್ತು ಸಂಸತ್ತಿನ ಸದಸ್ಯರು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರು ಮತ್ತು ಮಕ್ಕಳ್ ನೀತಿ ಮಯ್ಯಮ್ (ಎಂಕೆಎಂ) ಅಧ್ಯಕ್ಷ ಕಮಲ್ ಹಾಸನ್ ಅವರು ದೆಹಲಿಯಲ್ಲಿ ಶನಿವಾರ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ' ಎಂದು ಮೂಲಗಳು 'ಪಿಟಿಐ'ಗೆ ತಿಳಿಸಿವೆ.

ಕಮಲ್ ಹಾಸನ್ ಅವರು ಕಳೆದ ವಾರ ಎಂಕೆಎಂ ಕಚೇರಿಯಲ್ಲಿ ಮಾತನಾಡಿದ ಸಂದರ್ಭ, ಡಿಸೆಂಬರ್ 24ರಂದು ರಾಷ್ಟ್ರ ರಾಜಧಾನಿಯಲ್ಲಿ ಸಾಗಲಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ರಾಹುಲ್ ಗಾಂಧಿ ಆಹ್ವಾನಿಸಿರುವುದಾಗಿ ತಿಳಿಸಿದ್ದರು.

ದೆಹಲಿ ಯಾತ್ರೆಯಲ್ಲಿ ಕನಿಷ್ಠ 40-50 ಸಾವಿರ ಯಾತ್ರಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಚೌಧರಿ ಹೇಳಿದ್ದಾರೆ.

ಸೆಪ್ಟೆಂಬರ್ 7ಕ್ಕೆ ಕನ್ಯಾಕುಮಾರಿಯಿಂದ ಆರಂಭಗೊಂಡಿರುವ ಭಾರತ್ ಜೋಡೊ ಯಾತ್ರೆಯು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಹರಿಯಾಣದ ಮೂಲಕ ದೆಹಲಿಗೆ ಸಾಗಿಬಂದಿದೆ. ಈ ಯಾತ್ರೆಯು ಡಿಸೆಂಬರ್ 16ರಂದು ಶತದಿನಗಳನ್ನು ಪೂರೈಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.