ನವದೆಹಲಿ: ಬಿಜೆಪಿ ಸಂಸದೆ ಕಂಗನಾ ರನೌತ್ ಅವರಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಮಹಿಳಾ ಕಾನ್ಸ್ಟೆಬಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಆಗ್ರಹಿಸಿದ್ದಾರೆ.

ಈ ಕುರಿತಂತೆ ಎಕ್ಸ್ನಲ್ಲಿ ಬರೆದುಕೊಂಡಿರುವ ರೇಖಾ ಶರ್ಮಾ, ‘ವಿಮಾನ ನಿಲ್ದಾಣದಲ್ಲಿ ಭದ್ರತೆಯ ಹೊಣೆ ಹೊತ್ತಿರುವವರೇ ಅದನ್ನು ಉಲ್ಲಂಘಿಸುತ್ತಿರುವುದು ಗಂಭೀರ ವಿಷಯವಾಗಿದೆ. ಮಹಿಳಾ ಸಿಐಎಸ್ಎಫ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕಪಾಳಮೋಕ್ಷ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಕಾನ್ಸ್ಟೆಬಲ್ ಕುಲ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಆಕೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.